ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದ್ವಿಶತಕ ಬಾರಿಸಿದ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಮತ್ತು ರಿಕ್ಕಿ ಪಾಂಟಿಂಗ್ ದಾಖಲೆ ಯನ್ನು ಸರಿಗಟ್ಟಿದ ಕೇನ್ ವಿಲಿಯಮ್ಸನ್

Twitter
Facebook
LinkedIn
WhatsApp
skysports kane williamson cricket 6071388

ವೆಲ್ಲಿಂಗ್ಟನ್​ನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಬ್ಯಾಟರ್ ಕೇನ್ ವಿಲಿಯಮ್ಸನ್ ಭರ್ಜರಿ ದ್ವಿಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತ ನ್ಯೂಜಿಲೆಂಡ್ ತಂಡಕ್ಕೆ ಶ್ರೀಲಂಕಾ ಮೊದಲು ಬ್ಯಾಟ್ ಮಾಡುವ ಅವಕಾಶ ನೀಡಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಲಾಥಮ್ (21) ಬೇಗನೆ ಔಟಾದರೆ, ಡೆವೊನ್ ಕಾನ್ವೆ 78 ರನ್​ ಗಳಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೇನ್ ವಿಲಿಯಮ್ಸನ್ 296 ಎಸೆತಗಳಲ್ಲಿ 23 ಫೋರ್ ಹಾಗೂ 2 ಸಿಕ್ಸ್​ ಒಳಗೊಂಡಂತೆ 215 ರನ್​ ಬಾರಿಸಿದರು.

ವಿಶೇಷ ಎಂದರೆ ಈ ಡಬಲ್ ಸೆಂಚುರಿಯೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ದ್ವಿಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ವಿಲಿಯಮ್ಸನ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಹಾಗೂ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಿದ್ದರು.

ವಿಶೇಷ ಎಂದರೆ ಈ ಡಬಲ್ ಸೆಂಚುರಿಯೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ದ್ವಿಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ವಿಲಿಯಮ್ಸನ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಹಾಗೂ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಿದ್ದರು.

ಸಚಿನ್ ತೆಂಡೂಲ್ಕರ್ 329 ಟೆಸ್ಟ್ ಇನಿಂಗ್ಸ್​ಗಳಲ್ಲಿ ಒಟ್ಟು 6 ಬಾರಿ ದ್ವಿಶತಕದ ಸಾಧನೆ ಮಾಡಿದ್ದಾರೆ. ಇನ್ನು ವೀರೇಂದ್ರ ಸೆಹ್ವಾಗ್ 180 ಇನಿಂಗ್ಸ್​ಗಳಲ್ಲಿ 6 ಡಬಲ್ ಸೆಂಚುರಿ ಸಿಡಿಸಿದ್ದರು. ಹಾಗೆಯೇ ರಿಕಿ ಪಾಂಟಿಂಗ್ 287 ಟೆಸ್ಟ್ ಇನಿಂಗ್ಸ್​ಗಳಲ್ಲಿ 6 ಬಾರಿ ದ್ವಿಶತಕ ಬಾರಿಸಿ ಮಿಂಚಿದ್ದರು.

ಇದೀಗ ಕೇನ್ ವಿಲಿಯಮ್ಸನ್ 164 ಟೆಸ್ಟ್ ಇನಿಂಗ್ಸ್​ಗಳಲ್ಲಿ 6 ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ಸಚಿನ್, ಸೆಹ್ವಾಗ್, ಪಾಂಟಿಂಗ್ ದಾಖಲೆಗಳನ್ನು ಸರಿಗಟ್ಟಿದ್ದಾರೆ.

ಇನ್ನು ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಡಬಲ್ ಸೆಂಚುರಿ ಸಿಡಿಸಿದ ವಿಶ್ವ ದಾಖಲೆ ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್ ಹೆಸರಿನಲ್ಲಿದೆ. ಆಸ್ಟ್ರೇಲಿಯಾದ ಮಾಜಿ ಆಟಗಾರ 80 ಇನಿಂಗ್ಸ್​ಗಳಲ್ಲಿ ಒಟ್ಟು 12 ಬಾರಿ ದ್ವಿಶತಕ ಬಾರಿಸಿ ಮಿಂಚಿದ್ದರು. 2ನೇ ಸ್ಥಾನದಲ್ಲಿ ಕುಮಾರ ಸಂಗಾಕ್ಕರ (11 ದ್ವಿಶತಕ) ಹಾಗೂ 3ನೇ ಸ್ಥಾನದಲ್ಲಿ ಬ್ರಿಯಾನ್ ಲಾರಾ (9 ದ್ವಿಶತಕ) ಇದ್ದಾರೆ.

ಹಾಗೆಯೇ 183 ಟೆಸ್ಟ್ ಇನಿಂಗ್ಸ್​ಗಳಲ್ಲಿ ಒಟ್ಟು 7 ಬಾರಿ ದ್ವಿಶತಕ ಸಿಡಿಸಿರುವ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಡಬಲ್ ಸೆಂಚುರಿ ಸರದಾರರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ