ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್ ಸರ್ವರ್ ಗಳು ಸರಿಯಾದ ಸಮಯಕ್ಕೆ ಸಿಗದೆ ನಾಗರಿಕರು, ವಕೀಲರು ಹಾಗೂ ಇತರ ಡಾಕ್ಯುಮೆಂಟ್ ಕೆಲಸ ಮಾಡುವವರು ತೊಂದರೆ ಅನುಭವಿಸುತ್ತಿರುವುದು ಮತ್ತೆ ಮುಂದುವರಿದಿದೆ.
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!
Twitter
Facebook
LinkedIn
WhatsApp
ರಾಜ್ಯದ ಮಹತ್ವಕಾಂಕ್ಷಿ ಈ ಯೋಜನೆ ಹಿಂದಿನಗಿಂತಲೂ ಹೆಚ್ಚು ತೊಂದರೆಯನ್ನು ಉಂಟು ಮಾಡುತ್ತಿದ್ದು, ಇದರಿಂದ ರಾತ್ರಿ ಹಗಲು ಸರ್ವರಿಗಾಗಿ ಕಾಯಬೇಕಾದ ಪರಿಸ್ಥಿತಿ ಬಂದು ಒದಗಿದೆ ಎಂದು ವಕೀಲರೂಬ್ಬರು ಅಭಿಪ್ರಾಯ ಪಡುತ್ತಿದ್ದಾರೆ.
ಬೆಳಿಗ್ಗೆ ಹೊತ್ತುಗಳಲ್ಲಿ ಸರ್ವರ್ ಸಿಗುವುದೇ ಅಪರೂಪವಾಗಿದೆ. ಇದರಿಂದ ತಮ್ಮ ಕಕ್ಷಿಧಾರರಿಗೆ ಸರಿಯಾದ ಸಮಯಕ್ಕೆ ದಿನ ನಿಗದಿಪಡಿಸಲು ಬಹಳಷ್ಟು ತೊಂದರೆ ಅನುಭವಿಸಬೇಕಾಗಿ ಬಂದಿದೆ ಎಂದು ಹೆಚ್ಚಿನ ಡಾಕ್ಯುಮೆಂಟ್ ಕೆಲಸ ಮಾಡುವವರು ಅಭಿಪ್ರಾಯ ಪಡುತ್ತಾರೆ.
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ :ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ
ಮಂಗಳೂರು:ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ.
ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು.6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು.ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ