ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಕಲಿ ಚಿನ್ನಕ್ಕೆ 72 ಲಕ್ಷ ಸಾಲ ಕೊಟ್ಟ ದೇಶದ ಪ್ರತಿಷ್ಠಿತ ಬ್ಯಾಂಕ್!!

Twitter
Facebook
LinkedIn
WhatsApp
ನಕಲಿ ಚಿನ್ನಕ್ಕೆ 72 ಲಕ್ಷ ಸಾಲ ಕೊಟ್ಟ  ದೇಶದ ಪ್ರತಿಷ್ಠಿತ ಬ್ಯಾಂಕ್!!

ರಾಮನಗರ : ಚಿನ್ನ ಪರೀಕ್ಷಕನ ಸಹಾಯ ಪಡೆದು ನಕಲಿ ಚಿನ್ನ ಅಡವಿಟ್ಟು ಬರೋಬ್ಬರಿ 72 ಲಕ್ಷ ರೂ. ಸಾಲ ಪಡೆದು ವಂಚಿಸಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ನಡೆದಿದೆ.
ಕನಕಪುರ ತಾಲೂಕಿನ ಹೊನ್ನಿಗನಹಳ್ಳಿಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯ 352 ಖಾತೆಗಳ ಪೈಕಿ 271 ಖಾತೆಗಳಲ್ಲಿ ಅರ್ಧದಷ್ಟು ನಕಲಿ ಚಿನ್ನ ಹಾಗೂ 81 ಖಾತೆಗಳಲ್ಲಿ ಸಂಪೂರ್ಣವಾಗಿ ನಕಲಿ ಚಿನ್ನವನ್ನೇ ಅಡವಿರಿಸಿ ಬರೋಬ್ಬರಿ 72.50 ರೂ. ಹಣವನ್ನು ಪಡೆದು ಬ್ಯಾಂಕಿಗೆ ವಂಚಿಸಲಾಗಿದೆ.
ಬ್ಯಾಂಕಿನಲ್ಲಿ ಚಿನ್ನವನ್ನು ಪರೀಕ್ಷೆ ಮಾಡುತ್ತಿದ್ದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ರಾಜಣ್ಣ (52 ವರ್ಷ) ಎಂಬಾತನ ಮೇಲೆ ಬ್ಯಾಂಕ್‌ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ನಂಬಿಕೆಯನ್ನು ಇರಿಸಿಕೊಂಡಿದ್ದರು. ರಾಜಣ್ಣ ಚಿನ್ನ ಪರೀಕ್ಷೆ ಮಾಡಿದ ಸಿಬ್ಬಂದಿ ಆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ಬ್ಯಾಂಕ್‌ ಶಾಖೆಯಲ್ಲಿ ನಕಲಿ ಚಿನ್ನದ ಆಭರಣ ಅಡವಿಟ್ಟು ಸಾಲ ನೀಡುತ್ತಿರುವ ಕುರಿತು ಮಾಹಿತಿ ಪಡೆದ ಕೆನರಾ ಬ್ಯಾಂಕ್‌ನ ಸಹಾಯಕ ಜನರಲ್‌ ಮ್ಯಾನೇಜರ್‌ ಸಾತನೂರು ಪೊಲೀಸರಿಗೆ ದೂರು ನೀಡಿದ ಬೆನ್ನಲ್ಲೇ ಪ್ರಕರಣ ಬೆಳಕಿಗೆ ಬಂದಿದೆ.
ಪೊಲೀಸರು ಚಿನ್ನ ಪರೀಕ್ಷೆ ನಡೆಸುತ್ತಿದ್ದ ರಾಜಣ್ಣನನ್ನು ಬಂಧಿಸಿದ್ದಾರೆ. ಅಲ್ಲದೇ ಕೃತ್ಯದಲ್ಲಿ ಭಾಗಿಯಾದ ಆರೋಪದ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್‌ ಶಾಖೆಯ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಸೇರಿದಂತೆ ಒಟ್ಟು ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ರಾಜಣ್ಣ ಹಲವು ವರ್ಷಗಳಿಂದಲೂ ಬ್ಯಾಂಕಿನಲ್ಲಿ ಚಿನ್ನ ಪರೀಕ್ಷೆ ಮಾಡುತ್ತಿದ್ದ. ಬ್ಯಾಂಕ್‌ ಸಿಬ್ಬಂಧಿಗಳು ಸಂಪೂರ್ಣವಾಗಿ ರಾಜಣ್ಣನನ್ನು ನಂಬಿದ್ದರು. ಆದರೆ ರಾಜಣ್ಣ ಇದನ್ನೇ ಬಂಡವಾಳ ಮಾಡಿಕೊಂಡು ಜನರಿಂದ ನಕಲಿ ಚಿನ್ನವನ್ನು ಅಡವಿರಿಸಿಕೊಂಡು ವಂಚನೆ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು