ಮಂಗಳವಾರ, ಜುಲೈ 16, 2024
Karnataka Government: ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ತೀರ್ಮಾನ-K P Sharma Oli: ಕೆಪಿ ಶರ್ಮಾ ಒಲಿ ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರ-ಮಣಿಪುರದಲ್ಲಿ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ-ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಿದ ಕಾಂಗ್ರೆಸ್-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-ಅಮಿತಾಬ್ ಬಚ್ಚನ್ ಪಾದಗಳನ್ನು ಮುಟ್ಟಿದ ರಜಿನಿಕಾಂತ್, ವಿಡಿಯೋ ವೈರಲ್!-ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ; ಅಮೆರಿಕದ ಮಾಜಿ ಅಧ್ಯಕ್ಷನ ಬಲ ಕಿವಿಗೆ ಗಾಯ-13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟ ದರ್ಶನ್ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರ ಗೌಡ ಪೊಲೀಸ್‌ ವಶಕ್ಕೆ.!

Twitter
Facebook
LinkedIn
WhatsApp
ನಟ ದರ್ಶನ್ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರ ಗೌಡ ಪೊಲೀಸ್‌ ವಶಕ್ಕೆ.!

ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್ (Darshan Thoogudeepa) ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಬೆಳವಣಿಗೆ ನಡೆದಿದೆ. ಬೆಂಗಳೂರಿನಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು (Pavithra Gowda) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್​​.ಆರ್​.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ.

ಪವಿತ್ರಾಗೌಡಳನ್ನು ವಶಕ್ಕೆ ಪಡೆದ ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಕಾಮಾಕ್ಷಿ ಪಾಳ್ಯ‌ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ ಜೊತೆ ಅವರ ಅಕ್ಕ ಕೂಡ ಠಾಣೆಗೆ ಆಗಮಿಸಿದ್ದಾರೆ.

ಈ ಕೊಲೆ ಪ್ರಕರಣದಲ್ಲಿ​​ ನಟ ದರ್ಶನ್​ ಸೇರಿದಂತೆ 10 ಜನರನ್ನು ವಿಜಯನಗರ ಎಸಿಪಿ ಚಂದನ್​ ತಂಡ ಬಂಧಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಮೈಸೂರಿನ ಱಡಿಸನ್​ ಹೋಟೆಲ್​ನಲ್ಲಿ ದರ್ಶನ್​ ಅರೆಸ್ಟ್ ಮಾಡಲಾಗಿದ್ದು ನಟ ದರ್ಶನ್ ಸೇರಿದಂತೆ ಪಟ್ಟಣಗೆರೆ ಜಯಣ್ಣ ಪುತ್ರ ವಿನಯ್​, ಕಿರಣ್, ಮಧು, ಲಕ್ಷ್ಮಣ್​, ಆನಂದ್​​, ರಾಘವೇಂದ್ರ ಸೇರಿ 10 ಜನರನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಡಿಸಿಪಿ ಗಿರೀಶ್, ಎಸಿಪಿ ಚಂದನ್​ರಿಂದ ನಟ ದರ್ಶನ್​ ವಿಚಾರಣೆ ನಡೆಯುತ್ತಿದೆ. ಅನ್ನಪೂರ್ಣೇಶ್ವರಿನಗರ ಠಾಣೆ ಬಳಿ ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಇನ್ನು ಅಚ್ಚರಿ ಎಂದರೆ ಕೊಲೆಯಾದ ರೇಣುಕಾಸ್ವಾಮಿ ದರ್ಶನ್ ಅಭಿಮಾನಿ ಎಂಬ ಮಾಹಿತಿ ಸಿಕ್ಕಿದೆ. ದರ್ಶನ್, ವಿಜಯಲಕ್ಷ್ಮೀ ಸಂಸಾರ ಬಗ್ಗೆ ಯೋಚನೆ ಮಾಡ್ತಿದ್ದ ಸ್ವಾಮಿ, ದಂಪತಿ ಸಂಸಾರದಲ್ಲಿ ಪವಿತ್ರಾಗೌಡ ಬರುತ್ತಿದ್ದಾಳೆಂದು ತಿಳಿದು ಮೆಸೇಜ್ ಮಾಡಿದ್ದ. ಪವಿತ್ರಾಗೌಡಗೆ ಮೆಸೇಜ್ ಮಾಡುತ್ತಿರುವುದನ್ನು ತಿಳಿದ ಬಳಿಕ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ