ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಸ್ಲಿಮರನ್ನು ದ್ವೇಷಿಸಬೇಡಿ- ಬಿಜೆಪಿ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ

Twitter
Facebook
LinkedIn
WhatsApp
narendra modi pti101122

ನವದೆಹಲಿ: ದೆಹಲಿಯಲ್ಲಿ ಎರಡು ದಿನಗಳ ಕಾಲ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆಡಿರುವ ಒಂದು ಮಾತು ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.‌ ಮುಸ್ಲಿಂ ಸಮುದಾಯದ ಜನರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಪ್ರಧಾನಿ ಮೋದಿ ತಮ್ಮ ಪಕ್ಷದ ಮುಖಂಡರಿಗೆ ಸೂಚನೆ ನೀಡಿದ್ದಾರೆ. ದೇಶದ ಅನೇಕ ಸಮುದಾಯಗಳು ಬಿಜೆಪಿಗೆ ಮತ ಹಾಕುವುದಿಲ್ಲ, ಆದರೆ ಬಿಜೆಪಿ ಕಾರ್ಯಕರ್ತರು ಮುಸ್ಲಿಂ ಸಮುದಾಯಕ್ಕೆ ಅಗೌರವ ತೋರದೆ, ಉತ್ತಮ ಸಮನ್ವಯತೆ ಸ್ಥಾಪಿಸಿ ಅವರೊಂದಿಗೆ ಉತ್ತಮ ನಡವಳಿಕೆಯನ್ನು ರೂಪಿಸಬೇಕು ಎಂದು ಸಲಹೆ ನೀಡಿದ್ದಾರೆ.

ಈ ಹಿಂದೆ ಹೈದರಾಬಾದ್ ಕಾರ್ಯಕಾರಿಣಿಯಲ್ಲಿಯೂ ಪ್ರಧಾನಿ ಇದೇ ಮಾತನ್ನು ಹೇಳಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಯಾಕೆ ಇಂತಹ ಹೇಳಿಕೆ ನೀಡಬೇಕಾಯಿತು ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಮೋದಿಯವರ ಈ ಹೇಳಿಕೆಗಳ ನಂತರ ಬಿಜೆಪಿ ನಾಯಕರು ಮುಸ್ಲಿಂರ ವಿರುದ್ಧದ ದ್ವೇಷದ ಹೇಳಿಕೆಗಳು ಕಡಿಮೆಯಾಗಬಹುದೇ? ಆ ಸಮುದಾಯಕ್ಕೆ ತೆಗಳಿದರೆ ಮಾತ್ರ ಮತಗಳು ಬರುತ್ತವೆ ಎನ್ನುವ ಲೆಕ್ಕಾಚಾರದಲ್ಲಿರುವ ಮುಖಂಡರಿಂದ ಮುಸ್ಲಿಂ ಸಮಯದಾಯದ ವಿರುದ್ಧ ಮೌನ ವಹಿಸುವುದು ಸಾಧ್ಯವಾ..? ಎನ್ನುವ ಪ್ರಶ್ನೆ ಕಾಡತೊಡಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಹೈದರಾಬಾದ್ ಕಾರ್ಯಕಾರಿಣಿಯಲ್ಲಿ ಪಸ್ಮಾಂಡ ಮುಸ್ಲಿಮರನ್ನು ಬಿಜೆಪಿಯೊಂದಿಗೆ ಸೇರಿಸಿಕೊಳ್ಳುವ ಬಗ್ಗೆ ಮಾತನಾಡಿದ್ದರು. ಸಕಾರಾತ್ಮಕ ಕಾರ್ಯಕ್ರಮಗಳ ಮೂಲಕ ಅವರನ್ನು ಸೆಳೆಯುವ ಬಗ್ಗೆ ಸಲಹೆ ನೀಡಿದ್ದರು. ಇದರಿಂದ ಗುಜರಾತ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಒಂದಷ್ಟು ಲಾಭ ಸಿಕ್ಕಿದ್ದು, ಮುಸ್ಲಿಂ ಸಮುದಾಯದ ಒಂದಷ್ಟು ಮತಗಳು ಬಿಜೆಪಿ ಖಾತೆಗೆ ಬಂದಿವೆ. ಆದರೆ ಪ್ರಧಾನಿಯವರ ಮನವಿಯ ನಂತರವೂ ಕೆಲವು ಬಿಜೆಪಿ ನಾಯಕರು ಮುಸ್ಲಿಮರು ಮತ್ತು ಅವರ ಧಾರ್ಮಿಕ ಚಿಹ್ನೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ಇದು ದೇಶದಲ್ಲಿ ಉದ್ವಿಗ್ನ ವಾತಾವರಣವನ್ನು ಸೃಷ್ಟಿಸಿತ್ತು. ಈ ಕಾರಣಕ್ಕಾಗಿ ಬಿಜೆಪಿ ತನ್ನ ಇಬ್ಬರು ಹಿರಿಯ ನಾಯಕರಿಗೆ ಪಕ್ಷದಿಂದ ಗೇಟ್ ಪಾಸ್ ನೀಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ