ಸೋಮವಾರ, ಡಿಸೆಂಬರ್ 9, 2024
ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!-ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ-ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಫೆಂಗಲ್ ಆರ್ಭಟ : ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ-ಸಮುದಾಯ ಉಳಿಯಬೇಕಾದ್ರೆ ಕನಿಷ್ಠ ಮೂರು ಮಕ್ಕಳು ಅವಶ್ಯಕ : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್-ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾರಾವಿ ,ಉಜಿರೆ , ಸುಬ್ರಮಣ್ಯ ಸೇರಿ ದ.ಕ ದ 17 ಗ್ರಾಮ ಪಂಚಾಯತ್ ಸೀಲ್ ಡೌನ್.

Twitter
Facebook
LinkedIn
WhatsApp
ನಾರಾವಿ ,ಉಜಿರೆ , ಸುಬ್ರಮಣ್ಯ  ಸೇರಿ ದ.ಕ ದ 17 ಗ್ರಾಮ ಪಂಚಾಯತ್ ಸೀಲ್ ಡೌನ್.

ಮಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ದಕ್ಷಿನ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲೀಗ ಕೊರೊನಾ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಇದೀಗ ಜಿಲ್ಲೆಯ 17 ಗ್ರಾಪಂಗಳನ್ನು ಜೂ.14ರ ಬೆಳಗ್ಗೆ 9ರಿಂದ 21ರ ತನಕ ಬೆಳಗ್ಗೆ 9 ರವರೆಗೆ ಸೀಲ್‌ಡೌನ್‌ ಮಾಡಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ, ಉಜಿರೆ ಮತ್ತು ಚಾರ್ಮಾಡಿ, ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು, ಕಡಬ ತಾಲೂಕಿನ ಸುಬ್ರಮಣ್ಯ ಹಾಗೂ ಸವಣೂರು ಸಹಿತ 17 ಗ್ರಾಪಂಗಳನ್ನು ಸೀಲ್ ಡೌನ್ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 50ಕ್ಕಿಂತ ಹೆಚ್ಚು ಸಕ್ರೀಯ ಕೊರೊನಾ ಪ್ರಕರಣಗಳು ಇರುವ ಗ್ರಾಮಗಳನ್ನು ಸೀಲ್ ಡೌನ್ ಮಾಡಿ ಆದೇಶ ಹೊರಡಿಸಲಾಗಿದೆ.
ಸೀಲ್ ಡೌನ್ ಆಗಿರುವ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಹೊರಗಿನ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತ ಮಾಡಲಾಗಿದೆ. ಗ್ರಾಮದಿಂದ ಹೊರಗೆ ಹೋಗುವವರಿಗೆ ಹಾಗೂ ಒಳ ಬರುವವರಿಗೆ ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದೆ. ಆಸ್ಪತ್ರೆ, ಮೆಡಿಕಲ್, ಔಷಧಿ ಕೇಂದ್ರ, ಲ್ಯಾಬ್ ಹೊರತು ಪಡಿಸಿ ಉಳಿದೆಲ್ಲಾ ಸೇವೆಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ ಅಗತ್ಯ ವಸ್ತುಗಳಾದ ಹಾಲಿನ ಬೂತ್ ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ಪೆಟ್ರೋಲ್ ಬಂಕ್ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಕೊರೋನ ಸೋಂಕು ತಗ್ಗಿಸಲು ಕೆಲವು ಕಠಿಣ ನಿರ್ಧಾರ ಕೈಗೊಳ್ಳುವುದು ಅಗತ್ಯವಾಗಿದ್ದು, ನಾಗರಿಕರು ಸಹಕರಿಸಬೇಕು ಎಂದು ದ.ಕ. ಜಿಪಂ ಸಿಇಒ ಡಾ.ಕುಮಾರ್‌ ಮಾಹಿತಿ ನೀಡಿದ್ದಾರೆ.
ಇನ್ನು ಗ್ರಾಮ ಪಂಚಾಯತ್ ಸೀಲ್ ಡೌನ್ ಕಾರ್ಯವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಪಡೆಯನ್ನು ಆರಂಭಿಸಲಾಗಿದೆ. ಪ್ರಮುಖವಾಗಿ ಈ ಕಾರ್ಯಪಡೆ ಗ್ರಾಮದ ಜನರ ಮೇಲೆ ಕಣ್ಗಾವಲು ಇಡಲಿದೆ. ಅಲ್ಲದೇ ಜನರ ಅವಶ್ಯಕತೆಯ ಆಧಾರದ ಮೇಲೆ ಅಗತ್ಯವಸ್ತುಗಳನ್ನು ಪೂರೈಕೆ ಮಾಡಲಿದೆ. ಅಲ್ಲದೇ ನಿಯಮಗಳನ್ನು ಪಾಲನೆ ಮಾಡುವ ನಿಟ್ಟಿನಲ್ಲಿ ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಪಂಚಾಯತ್ ಪಿಡಿಓ, ಪೊಲೀಸ್ ವೃತ್ತ ನಿರೀಕ್ಷಕರಿಗೆ ಜವಾಬ್ದಾರಿಯನ್ನು ವಹಿಸಲಾಗಿದೆ. ಸೀಲ್ ಡೌನ್ ನಿಯಮಗಳನ್ನು ಪಾಲನೆ ಮಾಡದವರ ವಿರುದ್ದ ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು