
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಬೆಂಗಳೂರು: ಕರ್ನಾಟಕ ರಾಜ್ಯದ ಬಿಜೆಪಿಯ ಆಂತರಿಕ ಕಲಹ ಒಂದು ಹಂತದಲ್ಲಿ ಕಡಿಮೆ ಆದ ರೀತಿಯಲ್ಲಿ ಗೋಚರಿಸುತ್ತಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಿದ ನಂತರ ಬಿಜೆಪಿಯ ಆಂತರಿಕ ಕಲಹ ಕಡಿಮೆಯಾಗಿದೆ ಎಂದು ಮೇಲ್ನೋಟಕ್ಕೆ ಗೋಚರಿಸಿದರು ಆಂತರಿಕವಾಗಿ ಬೇರೆ ನಡೆಯುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ನಿಜವಾಗಿಯೂ ಹೈಕಮಾಂಡ್ ಲೆಕ್ಕಾಚಾರ ಬೇರೆ ಇದೆ ಇದೆ. ಆ ನೆಲೆಯಲ್ಲಿ ಅರುಣ್ ಸಿಂಗ್ ರಾಜ್ಯದಲ್ಲಿ ಇಮೇಜ್ ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಬೆಂಗಳೂರಿಗೆ ಆಗಮಿಸಿ ಆ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಿ ಹೋಗಿದ್ದಾರೆ ಎಂಬುದು ರಾಜಕೀಯ ವಿಶ್ಲೇಷಕರ ಮಾತು. ಹೈಕಮಾಂಡ್ ಹೊಸ ನಾಯಕತ್ವ ತರಲು ಬಹಳಷ್ಟು ತಂತ್ರಗಳನ್ನು ಮಾಡುತ್ತಿದೆ. ಆದರೆ ಆ ತಂತ್ರಗಳು ಅನುಷ್ಠಾನಗೊಳ್ಳದ ಸಮಯ ಬೇಕಾಗುತ್ತದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಒಂದು ಹಂತದಲ್ಲಿ ಬಂಡಾಯಗಾರರು ಸುಮ್ಮನೆ ಕುಳಿತು ಕೊಂಡಿದ್ದಾರೆ ಎಂದು ಅನಿಸಿದರೂ ಒಳಗೊಳಗೆ ಬೇರೆಯದೇ ರಾಜಕೀಯ ನಡೆಯುತ್ತಿದೆ ಎಂಬುದು ವಿಶ್ಲೇಷಕರ ಅಭಿಪ್ರಾಯ. ಒಂದೇ ಏಟಿಗೆ ಯಡಿಯೂರಪ್ಪನವರನ್ನು ಬದಲಾಯಿಸಲು ಸಾಧ್ಯ ಇಲ್ಲ ಎಂಬುದನ್ನು ಚೆನ್ನಾಗಿ ಅರಿತಿರುವ ರಾಜ್ಯ ಹೈಕಮಾಂಡ್ ತಂತ್ರಗಳನ್ನು ಮಾಡುವುದರಲ್ಲಿ ನಿರತವಾಗಿದೆ ಎಂಬುದು ವಿಶ್ಲೇಷಕರ ಅಭಿಪ್ರಾಯ. ಯಡಿಯೂರಪ್ಪ ಬದಲಾಗುತ್ತಾರೆ, ಬದಲಾಗುವುದಿಲ್ಲ ಎಂಬ ದಿನಕ್ಕೊಂದು ಸುದ್ದಿಗಳು ಹರಿದಾಡುತ್ತಿವೆ. ಒಟ್ಟಿನಲ್ಲಿ ಹೈಕಮಾಂಡ್ ಮುಂದೆ ಯಾವ ಅಸ್ತ್ರ ಇದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಈ ಸಂದರ್ಭದಲ್ಲಿ ಕಷ್ಟ ಸಾಧ್ಯ ಎನ್ನುತ್ತಾರೆ ವಿಶ್ಲೇಷಕರು.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್