- ರಾಜ್ಯ
- 10:46 ಫೂರ್ವಾಹ್ನ
- ಜನವರಿ 6, 2023
ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – 32 ಮಂದಿಗೆ ಗಾಯ
Twitter
Facebook
LinkedIn
WhatsApp

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಪಲ್ಟಿ ಹೊಡೆದು (Bus Overturn) ಬಸ್‌ನಲ್ಲಿದ್ದ 32 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಂಡ್ಯ (ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ಚನ್ನರಾಯಪಟ್ಟಣ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಗದಗದಿಂದ ಮೈಸೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಸ್ ವೇಗದಲ್ಲಿದ್ದರಿಂದ ತಡೆಗೋಡೆ ಮುರಿದಿದೆ. ಬಸ್ ಪಲ್ಟಿಯಾಗಿದ್ದು, ರಸ್ತೆ ಬದಿಯ ಜಮೀನಿಗೆ ಉರುಳಿ ಬಿದ್ದಿದೆ.
ಬಸ್‌ನಲ್ಲಿದ್ದ 32 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಓರ್ವ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರಿಗೆ ಕೆಆರ್ ಪೇಟೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಸಂಬಂಧ ಕೆಆರ್ ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.