ನೆಲ್ಯಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು..!

ನೆಲ್ಯಾಡಿ: ಬೈಕ್ ಹಾಗೂ ಮಹೀಂದ್ರಾ ಎಕ್ಸ್‌ಯುವಿ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಮೃತ ಸವಾರನನ್ನು ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ ನಾಳಾಲು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಹೀಂದ್ರಾ ಎಕ್ಸ್’ಯುವಿ ಕಾರು ಹಾಗೂ ಬೈಕ್ ನಡುವೆ ನೇಲ್ಯಡ್ಕ ಸಮೀಪ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಉಳ್ಳಾಲ: ಕುಂಪಲದಲ್ಲಿ ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ
ಉಳ್ಳಾಲ: ಬಜರಂಗದಳ ಕಾರ್ಯಕರ್ತನಿಗೆ ಸ್ಥಳೀಯ ಸಂಘದ ಸದಸ್ಯರೊಬ್ಬರು ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಇಂದು ಸಂಜೆ ಸಂಭವಿಸಿದೆ.
ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಎಂಬವರ ಮೇಲೆ ಹಲ್ಲೆ ನಡೆದಿದೆ. ಇವರಿಗೆ ಸ್ಥಳೀಯ ಕೇಸರಿ ಮಿತ್ರ ವೃಂದದ ಗೌತಮ್ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಜೂ. 4 ರಂದು ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಕೇಸರಿ ಮಿತ್ರ ವೃಂದದ ಸದಸ್ಯರ ನಡುವೆ ವಾಗ್ವಾದ ನಡೆದಿತ್ತು. ಈ ಸಂಬಂಧ ಇಂದು ಕೆಲಸದಿಂದ ವಾಪಸ್ಸಾಗುತ್ತಿದ್ದ ಪ್ರವೀಣ್ ಪೂಜಾರಿ ಅವರನ್ನು ಅಡ್ಡಗಟ್ಟಿದ ಗೌತಮ್ ಹಲ್ಲೆ ನಡೆಸಿ ದೂಡಿದ್ದು, ಪರಿಣಾಮ ಚರಂಡಿಗೆ ಬಿದ್ದ ಪ್ರವೀಣ್ ತಲೆಗೆ ಗಾಯವಾಗಿದೆ. ಗಾಯಾಳುವನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗಡ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಗೌತಮ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, ಇದರಿಂದ ಪಟಾಕಿ ಸಿಡಿಸಿದ ದ್ವೇಷಕ್ಕೆ ಹಲ್ಲೆ ನಡೆಸಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ವೈರಲ್ ಆಗಿದೆ
ಉಳ್ಳಾಲ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.