ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೆಹರು-ಗಾಂಧಿ ಕುಟುಂಬದ ವಿರುದ್ದ ‘ಮಾನಹಾನಿ’ ವೀಡಿಯೋ; ನಟಿ ಪಾಯಲ್ ರೋಹಟಗಿ ವಿರುದ್ದ ಮತ್ತೊಮ್ಮೆ ಎಫ್‌ಐಆರ್‌ ದಾಖಲು!

Twitter
Facebook
LinkedIn
WhatsApp
ನೆಹರು-ಗಾಂಧಿ ಕುಟುಂಬದ ವಿರುದ್ದ ‘ಮಾನಹಾನಿ’ ವೀಡಿಯೋ; ನಟಿ ಪಾಯಲ್ ರೋಹಟಗಿ ವಿರುದ್ದ ಮತ್ತೊಮ್ಮೆ ಎಫ್‌ಐಆರ್‌ ದಾಖಲು!

ನೆಹರು-ಗಾಂಧಿ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟ ಆರೋಪದ ಮೇಲೆ ಪುಣೆಯಲ್ಲಿ ನಟಿ ಪಾಯಲ್ ರೋಹಟಗಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನಟಿ ವಿರುದ್ದ ಪುಣೆ ನಗರ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಪುಣೆಯ ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 36 ವರ್ಷದ ನಟಿಯ ವಿರುದ್ಧ ಈ ಹಿಂದೆಯೂ ದೇಶದ ವಿವಿಧ ಪೊಲೀಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು. ಪ್ರಕರಣಗಳ ನೋಂದಣಿಯ ನಂತರ ಆಕೆ ಕ್ರಮವನ್ನು ಎದುರಿಸಿದ್ದಾರೆ.

“ಪಾಯಲ್ ರೋಹಟಗಿ ಅವರು ಪದೇ ಪದೇ ನೆಹರು ಗಾಂಧಿ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಅಂತಹ ಒಂದು ಪೋಸ್ಟ್ ಅನ್ನು ನಾವು ನೋಡಿದ್ದೇವೆ. ಆ ಪೋಸ್ಟ್‌ ಇತ್ತೀಚಿನದ್ದಾಗಿದೆ. ತರುವಾಯ, ನಾವು ಸೈಬರ್ ಅಪರಾಧ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ದೂರುನೀಡಿದ್ದೇವೆ. ಪೊಲೀಸರು ಅದರ ಮೇಲೆ ಕ್ರಮ ಕೈಗೊಂಡಿದ್ದಾರೆ ಮತ್ತು ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ಪುಣೆ ನಗರ ಕಾಂಗ್ರೆಸ್ ವಕ್ತಾರ ರಮೇಶ್ ಅಯ್ಯರ್ ತಿಳಿಸಿದ್ದಾರೆ.

ರೋಹಟಗಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ. ಕೋಮು ಸಾಮರಸ್ಯವನ್ನು ಕದಡಲು ಪ್ರಚೋದನೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆ ಸೆಕ್ಷನ್ 153ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪುಣೆ ನಗರ ಪೊಲೀಸ್ ಆಯುಕ್ತ ಅಮಿತಾಬ್ ಗುಪ್ತಾ
ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು