ಮಂಗಳವಾರ, ಜುಲೈ 16, 2024
Karnataka Government: ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ತೀರ್ಮಾನ-K P Sharma Oli: ಕೆಪಿ ಶರ್ಮಾ ಒಲಿ ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರ-ಮಣಿಪುರದಲ್ಲಿ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ-ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಿದ ಕಾಂಗ್ರೆಸ್-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-ಅಮಿತಾಬ್ ಬಚ್ಚನ್ ಪಾದಗಳನ್ನು ಮುಟ್ಟಿದ ರಜಿನಿಕಾಂತ್, ವಿಡಿಯೋ ವೈರಲ್!-ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ; ಅಮೆರಿಕದ ಮಾಜಿ ಅಧ್ಯಕ್ಷನ ಬಲ ಕಿವಿಗೆ ಗಾಯ-13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕಾದ ಜಯಂತಿ!

Twitter
Facebook
LinkedIn
WhatsApp
ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕಾದ ಜಯಂತಿ!

ಬೆಂಗಳೂರು:ಕನ್ನಡ ಚಿತ್ರರಂಗದ ಅಭಿನಯ ಶಾರದೆ ಖ್ಯಾತಿಯ ನಟಿ ಜಯಂತಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ನಿದ್ರೆಯಲ್ಲೇ ಚಿರನಿದ್ರೆಗೆ ಜಾರಿದ ಜಯಂತಿಯವರ ಆಸೆಯಂತೆ ಅವರ ಕಣ್ಣುಗಳನ್ನು ಡಾ.ರಾಜ್ ಐ ಬ್ಯಾಂಕ್ ಗೆ ಡೊನೇಟ್ ಮಾಡಲಾಗಿದೆ.

ಕತ್ತಲೆಯಲ್ಲಿ ಬದುಕು ನಡೆಸುವ ಅಂಧರಿಗೆ ನೆರವಾಗುವುದು ಪುಣ್ಯದ ಕೆಲಸ. ಹೀಗಾಗಿ ಮರಣಾನಂತರ ನೇತ್ರದಾನ ಮಾಡಿ ಎಂದು ಡಾ.ರಾಜ್ ಕುಮಾರ್ ಕರೆ ನೀಡಿದ್ದರು. ಅಷ್ಟೇ ಅಲ್ಲ ತಾವು ಕೂಡ ನೇತ್ರದಾನ ಮಾಡಿದ್ದರು.

ಡಾ.ರಾಜ್ ಜೊತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದ ಜಯಂತಿ ಕೂಡ ಡಾ.ರಾಜ್ ಆದರ್ಶವನ್ನೇ ಪಾಲಿಸಿದ್ದು, ತಮ್ಮ ನೇತ್ರದಾನ ಮಾಡಿದ್ದಾರೆ. ನಾರಾಯಣ ನೇತ್ರಾಲಯದಲ್ಲಿರುವ ಡಾ.ರಾಜ್ ಕುಮಾರ್ ಐ ಬ್ಯಾಂಕ್ ಗೆ ದಾನ ಮಾಡಲಾಗಿದೆ.

ಕನ್ನಡದ ಹಿರಿಯ ನಟಿ ಜಯಂತಿ ಇನ್ನಿಲ್ಲ.

ವಯೋಸಹಜ ಕಾಯಿಲೆ ಹಾಗೂ ಅಸ್ತಮಾದಿಂದ ಬಳಲುತ್ತಿದ್ದ ಜಯಂತಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಸದಾ ಕೃತಕ ಆಮ್ಲಜನಕದ ಸಹಾಯದಿಂದಲೇ ಜಯಂತಿಯವರು ಉಸಿರಾಡುತ್ತಿದ್ದರು. ಜಯಂತಿಯವರ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಕಲ್ಪಿಸಲಾಗಿತ್ತು.

ಬಳಿಕ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಜಯಂತಿಯವರ ಅಂತ್ಯಸಂಸ್ಕಾರ ನಡೆಯಿತು. ಪುತ್ರ ಕೃಷ್ಣಕುಮಾರ್ ಜಯಂತಿಯವರ ಅಂತಿಮ ವಿಧಿವಿಧಾನ ನಡೆಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು