ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ್ಯೂಜಿಲೆಂಡ್‌ ವಿರುದ್ಧ ತಿಣುಕಾಡಿ ರೋಚಕ 6 ವಿಕೆಟ್‌ಗಳ ಜಯ ಸಾಧಿಸಿದ ಭಾರತ

Twitter
Facebook
LinkedIn
WhatsApp
lpfjc0f8 suryakumar yadav afp 625x300 20 November 22

ಲಕ್ನೋ:ಟಾಸ್‌ ಗೆದ್ದು ಮೊದಲ ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ 8 ವಿಕೆಟ್‌ ನಷ್ಟಕ್ಕೆ 99 ರನ್‌ ಗಳಿಸಿತು. ಈ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಭಾರತ 19.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 101 ರನ್‌ ಗಳಿಸಿ ಗೆಲುವಿನ ನಗೆ ಬೀರಿತು. ಈ ಮೂಲಕ ಮೂರು T20 ಪಂದ್ಯಗಳ ಸರಣಿ 1-1ರಲ್ಲಿ ಸಮವಾಗಿದೆ.

ಕೊನೆಯ 18 ಎಸೆತಗಳಲ್ಲಿ ಗೆಲುವಿಗೆ 18 ರನ್‌ ಬೇಕಿತ್ತು. 18ನೇ ಓವರ್‌ನಲ್ಲಿ 5 ರನ್‌ ಬಂದರೆ 19ನೇ ಓವರ್‌ನಲ್ಲಿ 7 ರನ್‌ ಬಂತು. ಕೊನೆಯ ಓವರ್‌ನಲ್ಲಿ 6 ರನ್‌ ಬೇಕಿತ್ತು.

ಕೊನೆಯ ಓವರ್‌ ಹೇಗಿತ್ತು?
ಟಿಕ್ನರ್ ಎಸೆದ ಮೊದಲ ಎಸೆತದಲ್ಲಿ ಹಾರ್ದಿಕ್‌ ಪಾಂಡ್ಯ (Hardik Pandya) 1 ರನ್‌ ತೆಗೆದರೆ ಎರಡನೇ ಎಸೆತದಲ್ಲಿ ಯಾವುದೇ ರನ್‌ ಬಂದಿರಲಿಲ್ಲ. ಮೂರನೇ ಎಸೆತದಲ್ಲಿ ಸೂರ್ಯಕುಮಾರ್‌ (Suryakumar Yadav) ಕ್ಯಾಚ್‌ ಔಟ್‌ ಆಗುವ ಸಾಧ್ಯತೆ ಇತ್ತು. ಆದರೆ ವೇಗವಾಗಿ ಬಂದಿದ್ದ ಚೆಂಡನ್ನು ಹಿಡಿಯಲು ಟಿಕ್ನರ್‌ ವಿಫಲರಾದರು.

team india 12 768x432 1

4ನೇ ಎಸೆತದಲ್ಲಿ ಪಾಂಡ್ಯ ಒಂದು ರನ್‌ ಓಡಿದರು. ಈ ವೇಳೆ ಪಾಂಡ್ಯ ರನೌಟ್‌ ಆಗುವ ಸಾಧ್ಯತೆ ಇತ್ತು. ನೇರವಾಗಿ ವಿಕೆಟ್‌ಗೆ ಚೆಂಡು ಬಡಿಯುತ್ತಿದ್ದರೆ ಪಾಂಡ್ಯ ಪೆವಿಲಿಯನ್‌ ಸೇರಬೇಕಿತ್ತು. 5ನೇ ಎಸೆತದಲ್ಲಿ ಸೂರ್ಯಕುಮಾರ್‌ ಮಿಡ್‌ ಆಫ್‌ ಕಡೆ ಬೌಂಡರಿ ಹೊಡೆದು ತಂಡಕ್ಕೆ ಜಯವನ್ನು ತಂದುಕೊಟ್ಟರು.

ಸೂರ್ಯಕುಮಾರ್‌ ಯಾದವ್‌ ಔಟಾಗದೇ 26 ರನ್‌(31 ಎಸೆತ, 1 ಬೌಂಡರಿ) ಇಶನ್‌ ಕಿಶನ್‌ 19 ರನ್‌(32 ಎಸೆತ, 2 ಬೌಂಡರಿ) ಹಾರ್ದಿಕ್‌ ಪಾಂಡ್ಯ ಔಟಾಗದೇ 15 ರನ್‌ (20 ಎಸೆತ, 1 ಬೌಂಡರಿ) ಹೊಡೆದರು. ಈ ಪಂದ್ಯದಲ್ಲಿ ಭಾರತದ ಪರ ಒಂದು ಸಿಕ್ಸ್‌ ಸಿಡಿಯದೇ ಇರುವುದು ವಿಶೇಷ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ನ್ಯೂಜಿಲೆಂಡ್‌ ಆರಂಭದಿಂದಲೇ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತು. ನಾಯಕ ಮಿಚೆಲ್‌ ಸ್ಯಾಂಟ್ನರ್‌ ಔಟಾಗದೇ 19 ರನ್‌ ಹೊಡೆದದ್ದೇ ಗರಿಷ್ಟ ಸ್ಕೋರ್.‌

ಅರ್ಶ್‌ದೀಪ್‌ ಸಿಂಗ್ 2 ವಿಕೆಟ್‌ ಪಡೆದರೆ ಪಾಂಡ್ಯ, ವಾಷಿಂಗ್ಟನ್‌ ಸುಂದರ್‌, ಯಜುವೇಂದ್ರ ಚಹಲ್‌, ದೀಪಕ್‌ ಹೂಡಾ, ಕುಲದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ