ಶುಕ್ರವಾರ, ಡಿಸೆಂಬರ್ 13, 2024
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!-ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಂಜಾಬ್ ಕಾಂಗ್ರೆಸ್ ನಲ್ಲಿ ತೀವ್ರಗೊಂಡ ಆಂತರಿಕ ಬಿಕ್ಕಟ್ಟು.

Twitter
Facebook
LinkedIn
WhatsApp
ಪಂಜಾಬ್ ಕಾಂಗ್ರೆಸ್ ನಲ್ಲಿ ತೀವ್ರಗೊಂಡ ಆಂತರಿಕ ಬಿಕ್ಕಟ್ಟು.

ಅಮೃತಸರ:ಪಂಜಾಬ್‌ ಕಾಂಗ್ರೆಸ್‌ನಲ್ಲಿ ಆಂತರಿಕ ಬೇಗುದಿ ಶಮನಕ್ಕಾಗಿ ಪಕ್ಷದ ಹೈಕಮಾಂಡ್‌ ಕಸರತ್ತು ನಡೆಸುತ್ತಿದೆ. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಚಿಸಿದ್ದ ಕಾಂಗ್ರೆಸ್ ಸಮಿತಿಯು ಪಕ್ಷದ ಶಾಸಕರು ಮತ್ತು ರಾಜ್ಯದ ಮುಖಂಡರ ಜೊತೆ ಕೆಲವು ದಿನಗಳ ಹಿಂದೆ ಸಭೆ ನಡೆಸಿತ್ತು. ಆದರೂ, ಕಾಂಗ್ರೆಸ್‌ನೊಳಗಿನ ಕಿತ್ತಾಟ ಇನ್ನೂ ಮುಗಿದಿಲ್ಲ.
ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ಶಾಸಕ ಮತ್ತು ಮಾಜಿ ಕ್ಯಾಬಿನೆಟ್ ಸಚಿವ ನವಜೋತ್ ಸಿಂಗ್ ಸಿಧು, ಇಬ್ಬರೂ ನಾಯಕರ ಬೆಂಬಲಿಗರ ನಡುವೆ ಪೋಸ್ಟರ್ ಯುದ್ಧ ಭುಗಿಲೆದ್ದಿದೆ.

ಸಿಧು ಅವರನ್ನು ಒಳಗೊಂಡ ಹಲವಾರು ಪೋಸ್ಟರ್‌ಗಳನ್ನು ಅಮರಿಂದರ್ ಅವರ ತವರೂರಾದ ಪಟಿಯಾಲದಲ್ಲಿ ಹಾಕಲಾಗಿದ್ದು, ಮುಖ್ಯಮಂತ್ರಿಯ ಪೋಸ್ಟರ್‌ಗಳು ಅಮೃತಸರದಲ್ಲಿ ಅನೇಕ ಸ್ಥಳಗಳಲ್ಲಿ ಕಾಣಿಸಿಕೊಂಡಿವೆ.

ಈ ಇಬ್ಬರೂ ನಾಯಕರ ನಡುವಿನ ಆಂತರಿಕ ಭಿನ್ನಾಭಿಪ್ರಾಯವನ್ನು ತಾರ್ಕಿಕವಾಗಿ ಶಮನ ಮಾಡದಿದ್ದರೆ, ಮುಂದಿನ ಚುನಾವಣೆಯಲ್ಲಿ ಅಮರಿಂದರ್‌ ನೇತೃತ್ವದ ಸರ್ಕಾರ ಸಾರ್ವಜನಿಕರನ್ನು ಎದುರಿಸುವುದು ಕಷ್ಟವಾಗುತ್ತಿದೆ ಎಂದು ಪಕ್ಷದ ಒಂದು ವಿಭಾಗ ಹೇಳುತ್ತಿದೆ.
ಅಲ್ಲದೆ, ಅಧಿಕಾರಕ್ಕೆ ಬರುವ ಮೊದಲು ನೀಡಿದ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ವಿದ್ಯುತ್ ಖರೀದಿ ಒಪ್ಪಂದಗಳ ಬಗ್ಗೆ ಮರು ಮಾತುಕತೆ ನಡೆಸುವುದು ಮತ್ತು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಡ್ರಗ್ ಮಾಫಿಯಾ ಕುರಿತ ವರದಿಯನ್ನು ಸಾರ್ವಜನಿಕರಿಗೆ ನೀಡುವುದು ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರವು ವಿಫಲತೆಯನ್ನು ಪ್ರದರ್ಶಿಸಿದೆ ಎಂದು ಆ ವಿಭಾಗ ಒಪ್ಪಿಕೊಂಡಿದೆ.
ಅಸಮಾಧಾನಗೊಂಡ ಬಣವು ರಾಜ್ಯದಲ್ಲಿ ಪಕ್ಷದ ನಾಯಕತ್ವವನ್ನು ಬದಲಿಸಲು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದ ಕಾಂಗ್ರೆಸ್ ಹಿರಿಯ ಮುಖಂಡರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು