ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟು: ಅಮರಿಂದರ್‌ರನ್ನು ಸಿಎಂ ಸ್ಥಾನದಿಂದ ತೆಗೆದುಹಾಕಲು ಶಾಸಕರ ಒತ್ತಾಯ!

Twitter
Facebook
LinkedIn
WhatsApp
ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟು: ಅಮರಿಂದರ್‌ರನ್ನು ಸಿಎಂ ಸ್ಥಾನದಿಂದ ತೆಗೆದುಹಾಕಲು ಶಾಸಕರ ಒತ್ತಾಯ!

ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರುದ್ಧ ಶಾಸಕರಲ್ಲಿ ಅಸಮಾಧಾನವಿದೆ. ಕೆಲವು ಶಾಸಕರು ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಒತ್ತಾಯಿಸಿದ್ದಾರೆ ಎಂದು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪರ್ಗತ್ ಸಿಂಗ್ ಬುಧವಾರ ಹೇಳಿದ್ದಾರೆ.
“ಸಮಸ್ಯೆಗಳನ್ನು ಬಗೆಹರಿಸದ ಕಾರಣ, ಶಾಸಕರಲ್ಲಿ ಅಸಮಾಧಾನವಿದೆ. ಈ ವಿಚಾರವಾಗಿ ನಾನು ಎಐಸಿಸಿ ವೀಕ್ಷಕರ ಮೇಲ್ವಿಚಾರಣೆಯ ವೇಳೆ ಕಾಂಗ್ರೆಸ್ ಹೈಕಮಾಂಡ್‌ಗೆ ಸಲಹೆ ನೀಡುತ್ತೇನೆ. ಮುಖ್ಯಮಂತ್ರಿ ಎಲ್ಲಾ ಶಾಸಕರ ಸಭೆ ಕರೆಯಬೇಕು. ಅವರೊಂದಿಗೆ ಚರ್ಚೆಯ ನಂತರ ನಿರ್ಧರ ತೆಗೆದುಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.
“ಕೆಲವು ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್‌ಅನ್ನು ಭೇಟಿಯಾಗಿದ್ದಾರೆ. ನಾನೂ ಕೂಡ ಅಲ್ಲಿಗೆ ಹೋಗುತ್ತೇನೆ. ಅದರಲ್ಲಿ ಯಾವುದೇ ಸಮಸ್ಯೆ ಇಲ್ಲ. ನಾವು ಸಮಸ್ಯೆಗಳನ್ನು ಬೇರೆಡೆಗೆ ತಿರುಗಿಸಬಾರದು. ಕ್ಯಾಪ್ಟನ್ ಅಮರಿಂದರ್ ಸಿಂಗ್ ನಮ್ಮ ಮುಖ್ಯಮಂತ್ರಿ ಮತ್ತು ನಮಗೆ ಇದರಲ್ಲಿ ಯಾವ ತಕರಾರೂ ಇಲ್ಲ. ನಾವು ಕೆಲಸ ಮಾಡಬೇಕು” ಎಂದು ಎಂದು ಅವರು ತಿಳಿಸಿದ್ದಾರೆ.
ಪಕ್ಷದ ರಾಜ್ಯ ಘಟಕದಲ್ಲಿ ಬದಲಾವಣೆಗಳಾದ ನಂತರ ಸಂಭವನೀಯ ಸಮಸ್ಯೆಗಳನ್ನು ಪರಿಹರಿಸುವ ಆಲೋಚನೆಗಳಿವೆ. ಇದ್ದಕ್ಕಿದ್ದಂತೆ ಹೆಚ್ಚಿನ ಸಂಖ್ಯೆಯ ಶಾಸಕರು ನಿರಾಶೆಗೊಂಡಿದ್ದಾರೆ. ಇದಕ್ಕೆ ಕಾರಣವೇನು ಎಂದು ಪರಿಶೀಲಿಸುತ್ತೇವೆ. ಅದಕ್ಕಾಗಿ ಹಲವು ಪರಿಹಾರಗಳನ್ನು ಪಕ್ಷವು ಕಂಡುಕೊಳ್ಳುತ್ತದೆ ಎಂದು ಪಂಜಾಬ್‌ನ ಎಐಸಿಸಿ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ.
ಪಂಜಾಬ್‌ನ ವಿವಿಧ ಸಮಸ್ಯೆಗಳನ್ನು ನಿಭಾಯಿಸುವಲ್ಲಿ ಅಮರೀಂದರ್ ಸಿಂಗ್ ಅವರ “ಅಸಮರ್ಥತೆ” ಕಂಡು ಬಂದಿದೆ. ಈ ಬಗ್ಗೆ ಚರ್ಚಿಸಲು ರಾವತ್ ಅವರು ಡೆಹ್ರಾಡೂನ್‌ನಲ್ಲಿರುವ ಸಿಎಂ ನಿವಾಸದಲ್ಲಿ ಪಂಜಾಬ್ ಕಾಂಗ್ರೆಸ್ ನಾಯಕರ ನಿಯೋಗದೊಂದಿಗೆ ಸಭೆ ನಡೆಸಿದ್ದಾರೆ. ಪಂಜಾಬ್ ಕಾಂಗ್ರೆಸ್ ನಾಯಕರ ಒಂದು ಗುಂಪು ಅಮರೀಂದರ್ ಸಿಂಗ್ ಅವರ ವಿರುದ್ಧ ಪಕ್ಷದ ಹೈಕಮಾಂಡ್‌ಗೆ ದೂರು ನೀಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು