ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತಿಯನ್ನು ಹೆದರಿಸಲು ಸೀಮೆಎಣ್ಣೆ ಸುರಿದುಕೊಂಡ ಗರ್ಭಿಣಿ ಗಂಭೀರ-ಮಗು ಹೊಟ್ಟೆಯಲ್ಲೇ ಸಾವು

Twitter
Facebook
LinkedIn
WhatsApp
DB 06012023 arunima

ಕೊಚ್ಚಿ, ಜ 05 : ಪತಿಯನ್ನು ಹೆಸರಿಸುವುದಕ್ಕಾಗಿ ಗರ್ಭಿಣಿಯೊಬ್ಬಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ಕೊಚ್ಚಿಯಲ್ಲಿ ನಡೆದಿದೆ. ಇನ್ನು ಮಗು ಹೊಟ್ಟೆಯಲ್ಲೇ ಪ್ರಾಣ ಕಳೆದುಕೊಂಡಿದ್ದು, ಹೊರತೆಗೆಯಲು ಕಳೆದ ಮೂರು ದಿನಗಳಿಂದ ಪ್ರಯತ್ನ ನಡೆಯುತ್ತಿದೆ.

ಅರುಣಿಮಾ (27) ಆತ್ಮಹತ್ಯೆಗೆ ಯತ್ನಿಸಿದ ಗರ್ಭಿಣಿ. ಯೋಧನಾಗಿರುವ ಪತಿ ಅಜಯ್ ಪ್ರಕಾಶ್ ಅವರು ಘಟನೆ ನಡೆದ ದಿನದಂದು ಮನೆಯಲ್ಲಿದ್ದರು. ಸೇನೆಯಿಂದ ರಜೆಯಲ್ಲಿ ಊರಿಗೆ ಬಂದಿದ್ದ ವೇಳೆ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪತಿಗೆ ಬೆದರಿಕೆ ಹಾಕುವುದಕ್ಕಾಗಿ ಆಕೆ ಈ ಕೃತ್ಯ ಎಸಗಿದ್ದಾಳೆ ಎಂದು ತಿಳಿದು ಬಂದಿದೆ.

ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಆಕೆಯನ್ನು ಆಸ್ಪತ್ರೆಗೆ ಸೇರಿಸುವ ವೇಳೆ ಗ್ಯಾಸ್ ಸ್ಪೋಟದಿಂದ ಘಟನೆ ನಡೆದಿದೆ ಎಂದು ಪತಿ ಹೇಳಿದ್ದರು. ಆದರೆ ಬಳಿಕ ಆಕೆಯ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದ್ದು, ಆಕೆಯನ್ನು ಪರಸ್ಸಾಲಾದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸೇರಿಸಲಾಯಿತು. ಇದೀಗ ಆಕೆಯ ಸ್ಥಿತಿ ಗಂಭೀರವಾಗಿದ್ದು, ಮಗು ಹೊಟ್ಟೆಯೊಳಗೆ ಮೃತಪಟ್ಟಿದೆ. ಮೃತ ಮಗುವನ್ನು ಹೊರ ತೆಗೆಯಲು ಕಳೆದ ಮೂರು ದಿನಗಳಿಂದ ಆಸ್ಪತ್ರೆ ವೈದ್ಯರು ಪ್ರಯತ್ನದಲ್ಲಿ ತೊಡಗಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ