ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

Twitter
Facebook
LinkedIn
WhatsApp
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ ಮಾಜಿ‌ ಶಾಸಕ ಅಸಮಾಧಾನ ಹೊರಹಾಕಿದ್ದಾರೆ. ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು ರಘುಪತಿ ಭಟ್ (Raghupati Bhat)​, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತೇನೆ. ಮೇ 16ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತರ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಪಕ್ಷ ಉಚ್ಚಾಟನೆ ಮಾಡಿದ್ರೂ ನಾನು ಬಿಜೆಪಿ ಕಾರ್ಯಕರ್ತ. ನನಗೆ ಬಿ ಫಾರಂ ಕೊಟ್ಟು ಕರಾವಳಿಗೆ ಮಾನ್ಯತೆ ಕೊಡಿ. ಕರಾವಳಿಗೆ ಏನು ಮಾಡಿದ್ರೂ ನಡೆಯುತ್ತೆಂಬ ಭಾವನೆ ಬಿಡಲಿ. ಅಭ್ಯರ್ಥಿ ಬದಲಾವಣೆ ಮಾಡಿ ನನಗೆ ಅವಕಾಶ ಕೊಡಲಿ ಎಂದು ಹೇಳಿದ್ದಾರೆ.

ಕಾರ್ಯಕರ್ತರಿಗೆ ಬಹಳ ನೋವಾಗಿದೆ, ಒತ್ತಾಯ ಮಾಡಿದ್ದಾರೆ. ಹೀಗಾಗಿ ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತೇನೆ. ಬಂಡಾಯವಲ್ಲ, ಪಕ್ಷದ ವಿರುದ್ಧ ಸ್ಪರ್ಧೆ ಮಾಡುತ್ತಿಲ್ಲ. ಕರಾವಳಿ ಭಾಗದ ಧ್ವನಿಯಾಗಿ, ಕೆಲಸ ಮಾಡಬೇಕು. ಸೆಡ್ಡು ಹೊಡೆದು, ಬಂಡಾಯ ಮಾಡಿ ಕೆಲಸ ಮಾಡಬೇಕು. ಕರಾವಳಿ ಭಾಗವನ್ನು ಬಿಜೆಪಿ ನಿರ್ಲಕ್ಷ್ಯ ಮಾಡಿದೆ ಎಂದಿದ್ದಾರೆ.

ನೈರುತ್ಯ ಪದವೀಧರ ಕ್ಷೇತ್ರಕ್ಕೆ ಆಕಾಂಕ್ಷಿಯಾಗಿ ಕೆಲಸ ಮಾಡಿದ್ದೆ. ಕಳೆದ ಚುನಾವಣೆಯಲ್ಲಿ ಮಾಹಿತಿ ನೀಡದೆ ಟಿಕೆಟ್ ತಪ್ಪಿಸಲಾಗಿತ್ತು. ರಾಜಕೀಯ ನಿವೃತ್ತಿ ತೆಗೆದುಕೊಳ್ಳುವ ಆಲೋಚನೆ ಮಾಡಿದ್ದೆ. ಆರ್​ಎಸ್​ಎಸ್​​, ಬಿಜೆಪಿ ಪಕ್ಷದ ನಾಯಕರ ಬಳಿ ನಿವೃತ್ತಿ ಬಗ್ಗೆ ಹೇಳಿದ್ದೆ. ಪದವೀಧರ ಕ್ಷೇತ್ರದ ಬೇಡಿಕೆ ಇಟ್ಟಾಗ ಭರವಸೆ ಮಾತಾಡಿದ್ದರು. ಎಲ್ಲಾ ಸ್ತರದ ನಾಯಕರಲ್ಲಿ ಪರಿಷತ್ತಿನ ಟಿಕೆಟ್ ಕೇಳಿದ್ದೆ. ದಕ್ಷಿಣ ಕನ್ನಡ ಉಡುಪಿಯಲ್ಲಿ 38 ಸಾವಿರ ಮತದಾರರ ಸೇರ್ಪಡೆ ಮಾಡಿದ್ದೇವೆ. ಆದರೆ ಬಳಿಕ ಟಿಕೆಟ್ ಡಾ. ಧನಂಜಯ ಸರ್ಜಿಗೆ ಘೋಷಣೆಯಾಗಿದೆ ಎಂದರು.

ಒಂದು ವರ್ಷದ ಹಿಂದೆ ಪಕ್ಷಕ್ಕೆ ಬಂದ ಹೊಸಬರಿಗೆ ಟಿಕೆಟ್ ಕೊಡಲಾಗಿದೆ. ನನ್ನ ಮನಸ್ಸಿನ ಬೇಸರ ಫೇಸ್ ಬುಕ್​ನಲ್ಲಿ ಹೇಳಿಕೊಂಡಿದ್ದೆ. ಡಾ. ಧನಂಜಯ ಸರ್ಜಿ ಸಂಘ ಪರಿವಾರದ ವಿರುದ್ಧ ಕೆಲಸ ಮಾಡಿದವರು. ಯಾವ ಕಾರಣಕ್ಕೆ ಟಿಕೆಟ್ ಕೊಟ್ಟಿದ್ದೀರಿ ಎಂದು ಯಾರೂ ಸ್ಪಷ್ಟಪಡಿಸಿಲ್ಲ. ಜಾತಿ ಹಣದ ಬಲದಿಂದ ನೈರುತ್ಯ ಟಿಕೆಟ್ ಆಗಿದೆ ಎಂದು ಹೇಳಿದ್ದಾರೆ.

ಬೊಮ್ಮಾಯಿ, ಅಶೋಕ್, ಕಟೀಲ್ ಇದ್ದ ಸಭೆಯಲ್ಲಿ ಬೇಡಿಕೆ ಇಟ್ಟಿದ್ದೆ. ಬಿಎಸ್ ಯಡಿಯೂರಪ್ಪ, ವಿಜಯೇಂದ್ರ ಅವರಿಗೂ ಮಾಹಿತಿ ನೀಡಿದ್ದೆ. ಸಭೆಯಲ್ಲಿ ನನಗೆ ಸೂಕ್ತ ಸ್ಥಾನಮಾನದ ಭರವಸೆ ನೀಡಲಾಗಿತ್ತು. ಪಕ್ಷದಿಂದ ಆದ ನೋವುಗಳನ್ನೆಲ್ಲಾ ಹೇಳಿದ್ದೇನೆ. ಯಾರು ನನ್ನ ಟಿಕೆಟ್ ತಪ್ಪಿಸಿದ್ದಾರೋ ಗೊತ್ತಿಲ್ಲ. ಇದು ಚಿಹ್ನೆ ಇಲ್ಲದ ಚುನಾವಣೆ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ