ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.
ಕಾಸರಗೋಡು: ನಾಪತ್ತೆಯಾಗಿದ್ದ ವೃದ್ಧೆಯೋರ್ವರ ಮೃತದೇಹ ಪತ್ತೆ
ಕಾಸರಗೋಡು: ನಾಪತ್ತೆಯಾಗಿದ್ದ ವೃದ್ಧೆಯೋರ್ವರ ಮೃತದೇಹ ಪತ್ತೆಯಾದ ಘಟನೆ ಕಾಸರಗೋಡು ಕುಂಬಳೆ ಹೊಳೆಯಲ್ಲಿ ಗುರುವಾರ ಸಂಜೆ ನಡೆದಿದೆ.
ಬದಿಯಡ್ಕ ನಾರಂಪಾಡಿಯ ಲೀಲಾವತಿ (60) ಮೃತ ದುರ್ದೈವಿ.
ಕುಂಬಳೆ ನದಿಯ ಸೇತುವೆ ಸಮೀಪ ವೃದ್ಧೆಯ ಮೃತ ದೇಹ ಪತ್ತೆಯಾಗಿದ್ದು, ಉಪ್ಪಳ ದಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತ ದೇಹವನ್ನು ದಡಕ್ಕೆ ತಲುಪಿಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ.
ಸೋಮವಾರ ಬೆಳಿಗ್ಗೆ ಮನೆಯಿಂದ ಔಷಧಿ ಖರೀದಿಸಲೆಂದು ಹೊರಟಿದ್ದ ಲೀಲಾ ವತಿ ರಾತ್ರಿಯಾದರೂ ಮನೆಗೆ ಮರಳಿಲ್ಲ. ಈ ಹಿನ್ನಲೆಯಲ್ಲಿ ಪುತ್ರ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ ಮಹಿಳೆ ಆಟೋ ರಿಕ್ಷಾದಲ್ಲಿ ಕುಂಬಳೆ ದೇವಸ್ಥಾನ ತನಕ ಬಂದಿರುವುದು ತಿಳಿದು ಬಂದಿತ್ತು. ಈ ನಡುವೆ ಗುರುವಾರ ಸಂಜೆ ಕುಂಬಳೆ ನದಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.