ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಶ್ಚಿಮ ಬಂಗಾಳ ಬಿಜೆಪಿಯಲ್ಲಿ ಬಿರುಕು.24 ಶಾಸಕರು ಟಿಎಂಸಿ ಕಡೆಗೆ?

Twitter
Facebook
LinkedIn
WhatsApp
ಪಶ್ಚಿಮ ಬಂಗಾಳ ಬಿಜೆಪಿಯಲ್ಲಿ ಬಿರುಕು.24 ಶಾಸಕರು ಟಿಎಂಸಿ ಕಡೆಗೆ?

ಕೋಲ್ಕತಾ: ಬಂಗಾಳದ ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್ಗೆ  ಬಿಜೆಪಿಗರ ಹಿಮ್ಮುಖ ವಲಸೆ ವರದಿಯಾಗುತ್ತಿರುವ ಬೆನ್ನಲ್ಲೇ ಮತ್ತಷ್ಟು ಮಂದಿ ಶಾಸಕರು ದೀದಿ ಕಡೆ ವಾಪಾಸ್ಸಾಗುವ ಎಲ್ಲಾ ಸಾಧ್ಯತೆಗಳು ಕಂಡು ಬಂದಿದೆ.
ರಾಜ್ಯಪಾಲರೊಂದಿಗಿನ ಸುವೆಂದು ಅಧಿಕಾರಿಯ ಸಭೆಯಿಂದ  ಶಾಸಕರು ದೂರ ಉಳಿದಿದ್ದಾರೆ. ಬಂಗಾಳ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿರುವ ಸುವೇಂದು ಅಧಿಕಾರಿ ಅವರು ಸೋಮವಾರ ಸಂಜೆ ಪಕ್ಷದ ಶಾಸಕರ ನಿಯೋಗದೊಂದಿಗೆ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ಭೇಟಿಯಾದರು. ಈ ಸಭೆಯು ರಾಜ್ಯಪಾಲರಿಗೆ ಬಂಗಾಳದಲ್ಲಿ ನಡೆಯುತ್ತಿರುವ ಹಲವಾರು ಘಟನೆಗಳ ಬಗ್ಗೆ ತಿಳಿಸಲು ಮತ್ತು ಇತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಉದ್ದೇಶಿಸಲಾಗಿತ್ತು. ಆದರೆ ಬಿಜೆಪಿಯ 74 ಶಾಸಕರಲ್ಲಿ 24 ಮಂದಿ ಅವರೊಂದಿಗೆ ಹೋಗಲು ವಿಫಲರಾಗಿದ್ದರಿಂದ, ಬಿಜೆಪಿಯಿಂದ ಮತ್ತಷ್ಟು ಮಂದಿ ತಮ್ಮ ತವರು ಪಕ್ಷ ಟಿಎಂಸಿಗೆ ಮರಳಲಿದ್ದಾರೆ ಎಂದು ಹೇಳಲಾಗಿದೆ.

ಸುವೇಂಧು ಅಧಿಕಾರಿಯ ನಾಯಕತ್ವವನ್ನು ಸ್ವೀಕರಿಸಲು ಎಲ್ಲ ಶಾಸಕರು ಸಿದ್ಧರಿಲ್ಲ ಎನ್ನುವ ಮಾತುಗಳು ಕೂಡ ಕೇಳಿಸಿದೆ. ಕಳೆದ ಡಿಸೆಂಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾದ ಸುವೇಂದು ಅಧಿಕಾರಿ – ಆರಂಭದಲ್ಲಿ ಅವರು ಬಿಜೆಪಿಗೆ ಹೆಚ್ಚಿನ ಶಾಸಕರನ್ನು ಕರೆದು ತಂದಿದ್ದರು.

ಒಟ್ಟಿನಲ್ಲಿ ಪಶ್ಚಿಮ ಬಂಗಾಳದ ಬಿಜೆಪಿಯಲ್ಲಿ ಬಿರುಕು ಕಾಣುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಮುಂದೆ ಏನಾಗುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು