ಪಾಕ್ ಆಕ್ರಮಿತ ಕಾಶ್ಮೀರದಿಂದ ಅಕ್ರಮವಾಗಿ ಒಳನುಸುಳಿದ್ದ ಮಹಿಳೆಗೆ ಗುಂಡಿಕ್ಕಿ ಹತ್ಯೆ!
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ದಾಟಿದ ಅಪರಿಚಿತ ಮಹಿಳೆಯನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮಹಿಳೆ ಪಾಕ್ ಆಕ್ರಮಿತ ಕಾಶ್ಮೀರದಿಂದ ಬಂದವರಾಗಿದ್ದರು ಎಂದು ನಂಬಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಮಲ್ಕೋಟೆ ಪ್ರದೇಶದಲ್ಲಿ ಎಲ್ಒಸಿ ದಾಟಿ ಗಡಿ ಬೇಲಿಯ ಸಮೀಪ ಬರುತ್ತಿದ್ದಾಗ ಸೈನಿಕರು ಆಕೆಯನ್ನು ಪ್ರಶ್ನೆ ಮಾಡಿದ್ದರು, ಆದರೆ ಆಕೆ ಯಾವುದೇ ಉತ್ತರವನ್ನು ನೀಡಿಲ್ಲ, ಮುಂದೆ ಸಾಗುತ್ತಲೇ ಇದ್ದಳು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಂತರ ಪಡೆಗಳು ಮಹಿಳೆಯ ಮೇಲೆ ಗುಂಡು ಹಾರಿಸಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಒಳನುಸುಳುವಿಕೆ, ಮಾದಕ ವಸ್ತುಗಳು, ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಹಾಗೂ ಡ್ರೋನ್ಗಳ ಬೆದರಿಕೆಯನ್ನು ತಡೆಯುವಲ್ಲಿ ಗಡಿ ಭದ್ರತಾಪಡೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಜನವರಿಯಲ್ಲಿ ಪಂಜಾಬ್ನ ಭಾರತ-ಪಾಕಿಸ್ತಾನದ ಗಡಿಯಲ್ಲಿ ಇಬ್ಬರು ಸಶಸ್ತ್ರ ಒಳನುಸುಳುಕೋರರನ್ನು ಗುಂಡು ಹಾರಿಸಿ ಹತ್ಯೆಗೈಯಲಾಗಿತ್ತು.