ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಿಂಚಣಿ ಹಣ ಪಡೆಯಲು ಕುರ್ಚಿ ಬಳಸಿ ಕಿಲೋಮೀಟರ್ ಗಟ್ಟಲೆ ನಡೆದುಕೊಂಡು ಹೋದ ವೃದ್ಧೆ; ಮನಕಲುಕುವ ವಿಡಿಯೋ ವೈರಲ್

Twitter
Facebook
LinkedIn
WhatsApp
WhatsApp Image 2023 04 21 at 2.15.58 PM

ಭುವನೇಶ್ವರ: ಪಿಂಚಣಿ ಹಣವನ್ನು ಪಡೆಯಲು ವೃದ್ಧೆಯೊಬ್ಬರು ಕಿ.ಮೀ ಗಟ್ಟಲೆ ನಡೆದುಕೊಂಡೇ ಹೋಗಿರುವ ಮನಕಲುಕುವ ದೃಶ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.ಒಡಿಶಾದ ನಬ್ರಂಗ್‌ಪುರ ಜಿಲ್ಲೆಯ ಜರಿಗಾಂವ್ ಬ್ಲಾಕ್‌ನ 70 ವರ್ಷದ ಸೂರ್ಯ ಹರಿಜನ ಎಂಬ ವೃದ್ಧೆಗೆ ತಿಂಗಳಿಗೆ ಬರುವ ಪಿಂಚಣಿ ಹಣ ಬಡತನದ ಬದುಕು ಸಾಗಿಸಲು ಅನಿವಾರ್ಯ. ಇವರ ಹಿರಿಯ ಮಗ ಬೇರೆ ಬೇರೆ ರಾಜ್ಯದಲ್ಲಿ ವಲಸೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದು, ವೃದ್ಧೆ ಕಿರಿಯ ಮಗನೊಂದಿಗೆ ವಾಸಿಸುತ್ತಿದ್ದಾರೆ. ಕಿರಿಯ ಮಗ ದನಗಳನ್ನು ಮೇಯಿಸುತ್ತಾ ಜೀವನ ಸಾಗಿಸುತ್ತಾನೆ. ಗುಡಿಸಲಿನಲ್ಲೇ ವಾಸಿಸುವ ವೃದ್ಧೆಗೆ ತಿಂಗಳ ಪಿಂಚಣಿ ಹಣ ಮೂರು ಹೊತ್ತಿನ ಊಟಕ್ಕೆ ಅನಿವಾರ್ಯ.

70 ವರ್ಷವಾದರೂ ಅವರು ಪಿಂಚಣಿ ಹಣಕ್ಕಾಗಿ ಬ್ಯಾಂಕ್‌ ಇರುವ ಸ್ಥಳಕ್ಕೆ ನಡೆದುಕೊಂಡು ಹೋಗುತ್ತಾರೆ. ವಯಸ್ಸಾದ ಕಾರಣ ಬಾಗಿದ ಬೆನ್ನು, ಬರೀ ಕಾಲಿನಲ್ಲಿ ಖುರ್ಚಿಯೊಂದರ ಸಹಾಯ ಪಡೆದು ಮೆಲ್ಲನೆ ಕುಂಟುತ್ತಾ ಬ್ಯಾಂಕಿಗೆ ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ.ಅಷ್ಟು ಕಷ್ಟಪಟ್ಟು ಹೋದ ವೃದ್ಧೆಗೆ ಆಕೆಯ ಹೆಬ್ಬೆರಳು ದಾಖಲೆಗಳಿಗೆ ಹೊಂದಿಕೆ ಆಗಿಲ್ಲ.

ವಿಡಿಯೋ ವೈರಲ್‌ ಆಗುತ್ತಿದ್ದಂತೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬ್ಯಾಂಕ್‌ ಮ್ಯಾನೇಜರ್, ವೃದ್ದೆಯ ಬೆರಳು ಮುರಿದಿದೆ. ಇದರಿಂದ ಅವರು ಥಂಬ್‌ ನೀಡಲು ಆಗುತ್ತಿಲ್ಲ. ಈ ಸಮಸ್ಯೆಯನ್ನು ಪರಿಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

“ಅವರ ಬೆರಳುಗಳು ಮುರಿದುಹೋಗಿವೆ. ಆದ್ದರಿಂದ ಅವರು ಹಣವನ್ನು ಪಡೆಯಲು ಆಗುತ್ತಿಲ್ಲ. ಸದ್ಯ ಅವರಿಗೆ ಬ್ಯಾಂಕ್‌ ನಿಂದಲೇ ಕ್ಯಾಶ್‌ ರೂಪದಲ್ಲಿ 3,000 ರೂ.ವನ್ನು ನೀಡಲಾಗಿದೆ. ನಾವು ಈ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುತ್ತೇವೆ” ಎಂದು ಜರಿಗಾಂವ್ ಶಾಖೆಯ ಎಸ್‌ಬಿಐ ವ್ಯವಸ್ಥಾಪಕರು ತಿಳಿಸಿದ್ದಾರೆ.ಗ್ರಾಮದ ಸರಪಂಚ್‌ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂಥ ಅಸಹಾಯಕ ವ್ಯಕ್ತಿಗಳ ಸಮಸ್ಯೆಯನ್ನು ಆಲಿಸಿ ನಾವು ಪಿಂಚಣಿ ಹಣವನ್ನು ತಲುಪಿಸಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist