ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಿಎಸ್‌ಐ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Twitter
Facebook
LinkedIn
WhatsApp
Ravi Bopara 3 15

ಹಾಸನ: ಸಬ್‌ಇನ್ಸ್‌ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ (Fire) ಹಾಕಿರುವ ಘಟನೆ ಹಾಸನ (Hassan) ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ.

ಕೊಣನೂರು ಪೊಲೀಸ್ ಠಾಣೆ ಪಿಎಸ್‌ಐ (PSI) ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪೀಠೋಪಕಣಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

Ravi Bopara 3 16

ಶೋಭಾ ರಜೆ ಮುಗಿಸಿ ಶುಕ್ರವಾರ ಮನೆಗೆ ವಾಪಸಾದಾಗ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು, ಡಿವೈಎಸ್‌ಪಿ ಮುರುಳೀಧರ್ ಹಾಗೂ ವೃತ್ತ ನಿರೀಕ್ಷಕ ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಶೋಭಾ ಭರಮಕ್ಕನವರ್ ಕಳೆದ ಮೂರುವರೆ ತಿಂಗಳ ಹಿಂದಷ್ಟೇ ಜಾವಗಲ್ ಪೊಲೀಸ್ ಠಾಣೆಯಿಂದ ಕೊಣನೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಇದೀಗ ಘಟನೆ ಬಗ್ಗೆ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ