ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಿಯು ಫಲಿತಾಂಶ - ದ.ಕ. ಪ್ರಥಮ, ಬೆಂಗಳೂರು ದಕ್ಷಿಣ ದ್ವಿತೀಯ, ಉಡುಪಿಗೆ ನಾಲ್ಕನೇ ಸ್ಥಾನ

Twitter
Facebook
LinkedIn
WhatsApp
ಪಿಯು ಫಲಿತಾಂಶ – ದ.ಕ. ಪ್ರಥಮ, ಬೆಂಗಳೂರು ದಕ್ಷಿಣ ದ್ವಿತೀಯ, ಉಡುಪಿಗೆ ನಾಲ್ಕನೇ ಸ್ಥಾನ

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಫಲಿತಾಂಶದಲ್ಲಿ ಕರಾವಳಿಯ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡದ 445 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದಿದ್ದು, ಉಡುಪಿ ಜಿಲ್ಲೆಗೆ 4ನೇ ಸ್ಥಾನದಲ್ಲಿದೆ.

ಬೆಂಗಳೂರು ದಕ್ಷಿಣವೂ ದ್ವಿತೀಯ ಸ್ಥಾನದಲ್ಲಿದ್ದು, 302 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಲಭಿಸಿದೆ. 2ನೇ ಪಿಯು ಫಲಿತಾಂಶದಲ್ಲಿ ಬೆಂಗಳೂರು ಉತ್ತರ 3ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ಉತ್ತರದ 261 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ದೊರಕಿದೆ. ಇನ್ನು ಕೃಷ್ಣ ನಗರಿ ಉಡುಪಿ ಜಿಲ್ಲೆಯ 149 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ದೊರಕಿದ್ದು, ಹಾಸನ ೫ ನೇ ಸ್ಥಾನದಲ್ಲಿದೆ.
ಕೊರೊನಾ ಕಾರಣದಿಂದ ಎಸೆಸೆಲ್ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳನ್ನು ಪರಿಗಣಿಸಿ ಕೃಪಾಂಕ ನೀಡಿ ಈ ಬಾರಿ ವಿದ್ಯಾರ್ಥಿಗಳ ಫಲಿತಾಂಶ ಘೋಷಿಸಲಾಗಿದೆ. ಇನ್ನು ಈ ಬಾರಿ 450706 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 147055 ಮಂದಿ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 68729 ವಿದ್ಯಾರ್ಥಿಗಳು ಜಸ್ಟ್ ಪಾಸ್ ಆಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು