ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪೈಲೆಟ್ ತರಬೇತಿಯಲ್ಲಿ ಇದ್ದ ಕೊಡಗಿನ ಸುಂಟಿಕೊಪ್ಪ ದ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ.

Twitter
Facebook
LinkedIn
WhatsApp
ಪೈಲೆಟ್ ತರಬೇತಿಯಲ್ಲಿ ಇದ್ದ ಕೊಡಗಿನ ಸುಂಟಿಕೊಪ್ಪ ದ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ.

ಸುಂಟಿಕೊಪ್ಪ: ಕೊಡಗಿನ ಯುವಕ ಗುಜರಾತಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭವಿಷ್ಯದಲ್ಲಿ ಪೈಲೆಟ್ ಆಗಬೇಕೆಂಬ ಕನಸು ಹೊತ್ತಿದ್ದ ಸುಂಟಿಕೊಪ್ಪ ಸಮೀಪದ ಮಾದಾಪುರದ ಜಂಬೂರುಬಾಣೆಯ ಯುವಕ ಗುಜರಾತಿನ ಅಹಮದಾಬಾದ್ ನಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

ಸುಂಟಿಕೊಪ್ಪ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಬೋಪಯ್ಯ ಮತ್ತು ಮಾದಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಪೊನ್ನಮ್ಮ ಅವರ ಪುತ್ರ ಶಿಬಿ ಬೋಪಯ್ಯ(23) ಆತ್ಮಹತ್ಯೆಗೆ ಶರಣಾದ ಯುವಕ.

ಗುಜರಾತಿನ ಅಹಮದಾಬಾದ್ ನಲ್ಲಿ ಏರೋನಾಟಿಕ್ ಸೆಂಟರ್ ನಲ್ಲಿ ತರಬೇತಿ ಕೇಂದ್ರದಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿದ್ದ ಶಿಬಿ ಬೋಪಯ್ಯ ಇನ್ನೇನು 3 ತಿಂಗಳಲ್ಲಿ ತರಬೇತಿ ಮುಗಿಸಿ ಭವಿಷ್ಯದ ಪೈಲಟ್ ಆಗುವ ಕನಸು ಹೊತ್ತಿದ್ದನು.ಆದರೆ ಶುಕ್ರವಾರ ಸೆಂಟರ್ ಸಮೀಪದ ಕಾಡಿನಲ್ಲಿ ಮರವೊಂದಕ್ಕೆ‌ ನೇಣು ಹಾಕಿಕೊಂಡು ಆತ್ಮಹತ್ಯೆ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.
ಈಗಾಗಲೇ ಮನೆಯವರು ಗುಜರಾತಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ತಲುಪಿದ ನಂತರವೇ ನಿಜಾಂಶ ಹೊರ ಬೀಳಲಿದೆ.
ನೇಣು ಸ್ಥಿತಿಯಲ್ಲಿರುವ ಯುವಕನ ಕಿವಿಯಲ್ಲಿ ಇಯರ್ ಪೋನ್, ವಾಚ್, ಶೂ ಧರಿಸಿರುವುದು ಕಂಡು ಸಾರ್ವಜನಿಕರು ಸಂಶಯ ವ್ಯಕ್ತಪಡಿಸಿದ್ದಾರೆ. ಪಾಲಕರು ಗುಜರಾತಿ ತಲುಪಿದ ನಂತರವೇ ಸತ್ಯಾಂಶ ಹೊರ ಬರಬೇಕಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು