
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯೊಬ್ಬ ಸಿಂದಗಿ ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಸಿಂದಗಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸಂಗಮೇಶ್ ಹೊಸಮನಿ ಹಾಗೂ ಪೇದಗಳಾದ ಹೆಚ್.ಸಿ.ಮಂತ್ರಿ, ಗುರುರಾಜ ಮಶಿಹಾಳ ಮತ್ತು ಆನಂದ ಪಾಟೀಲ್ ಎಂಬ ಅಧಿಕಾರಿಗಳನ್ನು ರಾಷ್ಟ್ರೀಯ ಮಾನವ ಹಕ್ಕುಗಳ ನಿಯಮಗಳ ಅಡಿಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್ ತಿಳಿಸಿದ್ದಾರೆ.
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಲ್ಲಿ ದೇವೇಂದ್ರ ಸಂಗೋಗಿ ಎಂಬಾತನನ್ನು ಆಗಸ್ಟ್ 28ರಂದು ಸಿಂದಗಿ ಠಾಣೆಯ ಪೊಲೀಸರು ಬಂಧಿಸಿದ್ದರು. ಆರೋಪಿ ಆಗಸ್ಟ್ 29ರಂದು ಪೊಲೀಸ್ ಠಾಣೆಯ ಶೌಚಾಲಯದಲ್ಲಿ ತನ್ನ ಪ್ಯಾಂಟ್‌ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.
ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ. ಈ ಪ್ರಕರಣವನ್ನು ಲಾಕಪ್ ಡೆತ್ ಎಂಬ ಆರೋಪಗಳು ಕೇಳಿಬಂದಿದ್ದವು. ಇದೀಗ ಈ ಪ್ರಕರಣ ಸಂಬಂಧ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್