ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೊಲೀಸ್ ಠಾಣೆ ನಿರ್ಮಿಸಲು ಅರ್ಜಿ ಹಿಡಿದು ಗೃಹ ಸಚಿವರ ಭೇಟಿ ಮಾಡಿದ ಎಚ್.ಡಿ.ರೇವಣ್ಣ!

Twitter
Facebook
LinkedIn
WhatsApp
ಪೊಲೀಸ್ ಠಾಣೆ  ನಿರ್ಮಿಸಲು ಅರ್ಜಿ ಹಿಡಿದು ಗೃಹ ಸಚಿವರ ಭೇಟಿ ಮಾಡಿದ ಎಚ್.ಡಿ.ರೇವಣ್ಣ!

ಬೆಂಗಳೂರು: ಬಸವರಾಜ ಬೊಮ್ಮಾಯಿ ನಮ್ಮ ಹಳೆಯ ಸ್ನೇಹಿತ. ನಮ್ಮ ಪಕ್ಷದಲ್ಲಿ ಇದ್ದವರು. ರಾಜಕೀಯದ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಹೇಳಿದರು. ಬೆಂಗಳೂರಿನ ಆರ್. ಟಿ. ನಗರದಲ್ಲಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮಂಗಳವಾರ ಎಚ್. ಡಿ. ರೇವಣ್ಣ ಆಗಮಿಸಿದ್ದರು. ರೇವಣ್ಣ ಕೈಯಲ್ಲಿ ಅರ್ಜಿ ಹಿಡಿದು ಗೃಹ ಸಚಿವರನ್ನು ಭೇಟಿಯಾಗಿದ್ದು ಕುತೂಹಲಕ್ಕೆ ಕಾರಣವಾಗಿತ್ತು.

ಹೊಳೆನರಸೀಪುರದಲ್ಲಿ ಒಂದು ಪೊಲೀಸ್ ಠಾಣೆ ಆಗಬೇಕಿತ್ತು. ಅದಕ್ಕಾಗಿ ಬಂದಿದ್ದೆ ಅಷ್ಟೇ, ರಾಜಕೀಯದ ಬಗ್ಗೆ ಚರ್ಚೆ ನಡೆಸಿಲ್ಲ. ಯಡಿಯೂರಪ್ಪ ಬದಲಾವಣೆ ವಿಚಾರ, ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ ಎಂದು ಎಚ್. ಡಿ. ರೇವಣ್ಣ ಸ್ಪಷ್ಟಪಡಿಸಿದರು. ಎಚ್. ಡಿ. ರೇವಣ್ಣ ಹಾಸನ ಜಿಲ್ಲೆ ಹೊಳೆನರಸೀಪುರ ಕ್ಷೇತ್ರದ ಶಾಸಕರು. ವಿವಿಧ ಪಕ್ಷಗಳ ನಾಯಕರ ಜೊತೆ ಉತ್ತಮ ಸಂಬಂಧವನ್ನು ರೇವಣ್ಣ ಹೊಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು