ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!

Twitter
Facebook
LinkedIn
WhatsApp
ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ 17 ವರ್ಷದ ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದ ‘ಪೋರ್ಷೆ’ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಯರವಾಡ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ

‘ಮಾಹಿತಿ ನೀಡಲು ವಿಳಂಬ’ ಮತ್ತು ‘ಕರ್ತವ್ಯಲೋಪ’ ಆರೋಪದ ಹಿನ್ನೆಲೆಯಲ್ಲಿ ಇನ್‌ಸ್ಪೆಕ್ಟರ್ ರಾಹುಲ್ ಜಗದಾಳೆ ಮತ್ತು ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ವಿಶ್ವನಾಥ ತೋಡ್ಕರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮನೋಜ್ ಪಾಟೀಲ್ ತಿಳಿಸಿದ್ದಾರೆ.

porshe

ಅಪ್ರಾಪ್ತನ ರಕ್ತದ ಮಾದರಿಗಳನ್ನು ಸಂಗ್ರಹಿಸುವಲ್ಲಿ ವಿಳಂಬವಾಗಿದೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ಅಪಘಾತಕ್ಕೂ ಮುನ್ನ ಅಪ್ರಾಪ್ತರು ಎರಡು ಪಬ್‌ಗಳಲ್ಲಿ ಮದ್ಯ ಸೇವಿಸಿದ್ದರು. ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ರಾತ್ರಿ 11 ಗಂಟೆಗೆ ರಕ್ತದ ಮಾದರಿ ತೆಗೆದುಕೊಳ್ಳಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಈ ಅಪರಾಧವನ್ನು ಆರಂಭದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಎ) (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ದಾಖಲಿಸಲಾಗಿತ್ತು. ನಂತರ ಸೆಕ್ಷನ್ 304 ಅನ್ನು ಸೇರಿಸಲಾಯಿತು ಎಂದು ಕುಮಾರ್ ಹೇಳಿದರು. ಈ ಅಪಘಾತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದರು.

 

ಅಪ್ರಾಪ್ತ ಬಾಲಕನ ತಂದೆ ಮತ್ತು ಇತರ ಐವರಿಗೆ ಜೂನ್ 7ರವರೆಗೆ ನ್ಯಾಯಾಂಗ ಬಂಧನ

ಪೋರ್ಷೆ ಅಪಘಾತ ಪ್ರಕರಣದ ಆರೋಪಿ 17 ವರ್ಷದ ಬಾಲಕನ ತಂದೆ ವಿಶಾಲ್ ಅಗರ್ವಾಲ್ ಸೇರಿದಂತೆ ಆರು ಮಂದಿಯನ್ನು ಪುಣೆ ನ್ಯಾಯಾಲಯ ಶುಕ್ರವಾರ ಜೂನ್ 7 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಪುಣೆಯ ಕಲ್ಯಾಣಿ ನಗರದಲ್ಲಿ ಭಾನುವಾರ ಮುಂಜಾನೆ ಪೋರ್ಷೆ ಕಾರನ್ನು ಚಲಾಯಿಸುತ್ತಿದ್ದ ಅಪ್ರಾಪ್ತ ಚಾಲಕ, ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಗುದ್ದಿ ಹತ್ಯೆ ಮಾಡಿದ್ದನು. ಹದಿಹರೆಯದವರು ಕುಡಿದ ಅಮಲಿನಲ್ಲಿ ಕಾರು ಚಲಾಯಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಅಪ್ರಾಪ್ತ ಬಾಲಕ ಕಾರು ಚಲಾಯಿಸುತ್ತಿಲ್ಲ ಎಂದು ತೋರಿಸುವ ಪ್ರಯತ್ನ: ಪುಣೆ ಪೊಲೀಸ್ ಆಯುಕ್ತ

ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ 17 ವರ್ಷದ ಅಪ್ರಾಪ್ತನು ಕಾರನ್ನು ಓಡಿಸುತ್ತಿರಲಿಲ್ಲ ಎಂದು ತೋರಿಸಲು ಸಾಕ್ಷ್ಯವನ್ನು ತಿರುಚಲು ಪ್ರಯತ್ನಿಸಲಾಗಿದೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ತಿಳಿಸಿದ್ದಾರೆ. ಕಾರನ್ನು ವಯಸ್ಕ ಚಾಲಕ ಓಡಿಸುತ್ತಿದ್ದ ಎಂದು ತೋರಿಸಲು ಪ್ರಯತ್ನಿಸಲಾಯಿತು, ಆದರೆ ಪ್ರಯತ್ನ ವಿಫಲವಾಯಿತು ಎಂದು ಕುಮಾರ್ ತಿಳಿಸಿದರು. ಅಪ್ತಾಪ್ತನು ಪಬ್‌ನಲ್ಲಿ ಮದ್ಯ ಸೇವಿಸಿರುವ ಸಿಸಿಟಿವಿ ದೃಶ್ಯಾವಳಿ ನಮ್ಮ ಬಳಿ ಇದೆ. ಇದರರ್ಥ ನಮ್ಮ ಪ್ರಕರಣವು ರಕ್ತದ ವರದಿಯ ಮೇಲೆ ಮಾತ್ರ ಅವಲಂಬಿತವಾಗಿಲ್ಲ. ನಮ್ಮ ಬಳಿ ಇತರ ಪುರಾವೆಗಳಿವೆ ಎಂದು ಕುಮಾರ್ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ