ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ 49 ಬೌಂಡರಿ ಸಹಿತ 379 ರನ್ – ದಾಖಲೆ ಬರೆದ ಪೃಥ್ವಿ ಶಾ

Twitter
Facebook
LinkedIn
WhatsApp
unnamed 1

ಗುವಾಹಟಿ: ಮುಂಬೈ (Mumbai) ಮತ್ತು ಅಸ್ಸಾಂ (Assam) ನಡುವಿನ ರಣಜಿ (Ranji) ಪಂದ್ಯದಲ್ಲಿ ತ್ರಿಶತಕ ಸಿಡಿಸಿ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ಅತೀ ಹೆಚ್ಚು ರನ್ ಸಿಡಿಸಿದ ಆರಂಭಿಕ ಆಟಗಾರ ಎಂಬ ದಾಖಲೆಯನ್ನು ಮುಂಬೈಕರ್ ಪೃಥ್ವಿ ಶಾ (Prithvi Shaw) ಬರೆದಿದ್ದಾರೆ.

ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನಸೆಳೆದ 23ರ ಹರೆಯದ ಪೃಥ್ವಿ ಶಾ ಅಸ್ಸಾಂ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಮಿಂಚಿದರು. 2ನೇ ದಿನದಾಟದಲ್ಲಿ ಪೃಥ್ವಿ ಶಾ 379 ರನ್ (383 ಎಸೆತ, 49 ಬೌಂಡರಿ, 4 ಸಿಕ್ಸ್) ಚಚ್ಚಿ ಔಟ್ ಆದರು. ಈ ಮೂಲಕ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಆರಂಭಿಕ ಆಟಗಾರ ಎಂಬ ದಾಖಲೆಯನ್ನು ಬರೆದಿದ್ದಾರೆ. 2016ರಲ್ಲಿ ಸಮಿತ್ ಗೂಹೆಲ್ ಆರಂಭಿಕರಾಗಿ ಸಿಡಿಸಿದ 359 ರನ್ ದಾಖಲೆಯಾಗಿತ್ತು. ಈ ದಾಖಲೆಯನ್ನು ಪೃಥ್ವಿ ಶಾ ಮುರಿದಿದ್ದಾರೆ. 

ಜೊತೆಗೆ ಮುಂಬೈ ಪರ ರಣಜಿ ಪಂದ್ಯದಲ್ಲಿ ಅತೀ ಹೆಚ್ಚು ರನ್ ಸಿಡಿಸಿದ ಆಟಗಾರ ಎಂಬ ನೂತನ ದಾಖಲೆಯನ್ನೂ ಬರೆದಿದ್ದಾರೆ. ಈ ಹಿಂದೆ ಮುಂಬೈ ಪರ ಸಂಜಯ್ ಮಾಂಜ್ರೇಕರ್ 377 ರನ್ ಸಿಡಿಸಿದ್ದು, ಹೆಚ್ಚಿನ ರನ್ ಆಗಿತ್ತು. ಈ ದಾಖಲೆಯನ್ನು ಮುರಿದು ನೂತನ ದಾಖಲೆಯನ್ನು ಪೃಥ್ವಿ ಶಾ ಬರೆದಿದ್ದಾರೆ.

 

379 ರನ್ ಬಾರಿಸಿ ಮುನ್ನಗ್ಗುತ್ತಿದ್ದ ಪೃಥ್ವಿ ಶಾರನ್ನು ಕಡೆಗೆ ರಿಯಾನ್ ಪರಾಗ್ ಎಲ್‍ಬಿಡಬ್ಲ್ಯೂ ಬಲೆ ಬೀಳಿಸಿ ಔಟ್ ಮಾಡಿದರು. ಈ ಮೂಲಕ ಪೃಥ್ವಿ ಶಾ 21 ರನ್‍ಗಳ ಅಂತರದಿಂದ 400 ರನ್ ಸಿಡಿಸುವ ಅವಕಾಶ ವಂಚಿತರಾದರು. ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ಮಹಾರಾಷ್ಟ್ರದ ವಿರುದ್ಧ ಬಿ.ಬಿ ನಿಂಬಾಳ್ಕರ್ 1948-49ರಲ್ಲಿ ಸಿಡಿಸಿದ 443 ರನ್‌ ಭಾರತೀಯ ಆಟಗಾರನ ಅತೀ ಹೆಚ್ಚಿನ ರನ್ ಗಳಿಕೆಯಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ