ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರಧಾನಿ ನರೇಂದ್ರ ಮೋದಿ ಪ್ರಪಂಚದ ಅತ್ಯಂತ ಪ್ರಭಾವಿ ವ್ಯಕ್ತಿ: ಬ್ರಿಟನ್ ಸಂಸದ

Twitter
Facebook
LinkedIn
WhatsApp
Karan Bilimoria

ಲಂಡನ್: ಪ್ರಧಾನಿ ನರೇಂದ್ರ ಮೋದಿ ಪ್ರಪಂಚದ ಅತ್ಯಂತ ಪ್ರಭಾವಿ ವ್ಯಕ್ತಿ ಎಂದು ಬ್ರಿಟನ್ ಸಂಸದ ಲಾರ್ಡ್ ಕರನ್ ಬಿಲಿಮೋರಿಯಾ ಬಣ್ಣಿಸಿದ್ದಾರೆ. ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಗಳ ಜತೆ ಒಪ್ಪಂದಗಳನ್ನು ಮಾಡಿಕೊಳ್ಳಬೇಕಾದ ಅಗತ್ಯತೆ ಬಗ್ಗೆ ಸಂಸತ್​​ನಲ್ಲಿ ಪ್ರಸ್ತಾಪಿಸುವಾಗ ಅವರು ಭಾರತದ ಪ್ರಧಾನಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಗುಜರಾತ್​ನ ರೈಲು ನಿಲ್ದಾಣದಲ್ಲಿ ಚಹಾ ಮಾರಾಟ ಮಾಡಿದ್ದ ಹುಡುಗ ಇಂದು ವಿಶ್ವದ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಇಂದು ಭಾರತವು ಜಿ20 ಅಧ್ಯಕ್ಷತೆ ವಹಿಸಿಕೊಂಡಿದೆ. ಮುಂದಿನ 25 ವರ್ಷಗಳಲ್ಲಿ ಏನಾಗಬೇಕು ಎಂಬ ದೃಷ್ಟಿಕೋನವನ್ನು ಹೊಂದಿದೆ. 

32 ಶತಕೋಟಿ ಡಾಲರ್ ಜಿಡಿಪಿಯೊಂದಿಗೆ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ಅವರು ಹೇಳಿದ್ದಾರೆ. ಭಾರತವು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ. ಮುಂದಿನ ದಶಕಗಳಲ್ಲಿ ಬ್ರಿಟನ್ ಅದರ ಹತ್ತಿರದ ಮತ್ತು ಅತ್ಯಂತ ವಿಶ್ವಾಸಾರ್ಹ ಸ್ನೇಹಿತ ಆಗಿರಬೇಕು ಎಂದು ಅವರು ಆಗ್ರಹಿಸಿದ್ದಾರೆ. ‘ಬ್ರಿಟನ್ ಮತ್ತು ಭಾರತದ ನಡುವಣ ಬಾಂಧವ್ಯದ ಮಹತ್ವ’ ಎಂಬ ವಿಷಯದ ಮೇಲೆ ನಡೆದ ಚರ್ಚೆಯಲ್ಲಿ ಅವರು ಮಾತನಾಡಿದ್ದಾರೆ.

ಬ್ರಿಟನ್​ ಅನ್ನು ಹಿಂದಿಕ್ಕಿರುವ ಭಾರತವೀಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ್ದು, ವೇಗವಾಗಿ ಬೆಳವಣಿಗೆ ಹೊಂದುತ್ತಿದೆ ಎಂದು ಲಾರ್ಡ್ ಕರನ್ ಹೇಳಿದ್ದಾರೆ.

75 ವರ್ಷಗಳ ಪ್ರಜಾಪ್ರಭುತ್ವದೊಂದಿಗೆ ಭಾರತವೀಗ ಯುವ ದೇಶವಾಗಿದೆ. ಕಳೆದ ಹಣಕಾಸು ವರ್ಷದಲ್ಲಿ ಶೇ 8.7ರ ಬೆಳವಣಿಗೆ ದರ ದಾಖಲಿಸಿದೆ. ನವೀಕರಿಸಬಹುದಾದ ಇಂಧನ ಮತ್ತು ಸೌರ ಶಕ್ತಿಯ ಅತಿದೊಡ್ಡ ಉತ್ಪಾದಕ ದೇಶವಾಗಿದೆ ಎಂದು ಅವರು ಹೇಳಿದ್ದಾರೆ. ಭಾರತ ಈಗ ಬ್ರಿಟನ್​​ನ 12ನೇ ಅತಿದೊಡ್ಡ ವ್ಯಾಪಾರ ಪಾಲುದಾರ ದೇಶವಾಗಿದೆ. ಇದು ಸಾಲದು. ಇದನ್ನು ಇನ್ನೂ ಹೆಚ್ಚಿಸಬೇಕು ಎಂದೂ ಅವರು ಹೇಳಿದ್ದಾರೆ.

ಭಾರತದ ಜಿ20 ಅಧ್ಯಕ್ಷ ಸ್ಥಾನವು ನಿರ್ಣಾಯಕ ಸಮಯದಲ್ಲಿ ಬಂದಿದೆ. ಜಾಗತಿಕ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವವು ನಿರ್ಣಾಯಕವಾಗಿದೆ ಎಂದು ವಿಶ್ವ ಆರ್ಥಿಕ ವೇದಿಕೆಯ ಸ್ಥಾಪಕ, ಕಾರ್ಯನಿರ್ವಾಹಕ ಅಧ್ಯಕ್ಷ ಕ್ಲೌಸ್ ಶ್ವಾಬ್ ಶುಕ್ರವಾರ ಬಿಡುಗಡೆ ಮಾಡಿದ್ದ ವಿಶೇಷ ಹೇಳಿಕೆಯಲ್ಲಿ ಉಲ್ಲೇಖಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist