ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ಕಾರವಾರ:ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದ್ದು ಕರುನಾಡಿನ ಜನ ತತ್ತರಿಸಿ ಹೋಗಿದ್ದಾರೆ. ಅಧಿಕ ಮಳೆಯಿಂದಾಗಿ ಕಾರವಾರದ ಗಂಗಾವಳಿ ನದಿ ಉಕ್ಕಿ ಹರಿಯುತ್ತಿದೆ. ಮದುವೆ ದಿಬ್ಬಣ ತುಂಬಿರುವ ವಾಹನ ಪ್ರವಾಹದಲ್ಲಿ ಸಿಲುಕಿ ಅವಾಂತರವೇ ಸೃಷ್ಟಿಯಾಗಿತ್ತು.
ಹೌದು… ಮದುವೆ ದಿಬ್ಬಣ ತುಂಬಿರುವ ವಾಹನ ಕಾರವಾರದ ಗಂಗಾವಳಿ ನದಿಯ ಪ್ರವಾಹದಲ್ಲಿ ಸಿಲುಕಿದ್ದರ ಪರಿಣಾಮ ವಾಹನದಲ್ಲಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿ ಅಪಾಯದಿಂದ ಪಾರು ಮಾಡಿರುವ ಘಟನೆ ಅಂಕೋಲಾ ತಾಲೂಕಿನ ಶೀರೂರು ಬಳಿ ನಡೆದಿದೆ. ಗಂಗಾವಳಿ ನದಿ ಉಕ್ಕಿ ಹರಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66 ಬಂದ್ ಆಗಿತ್ತು. ನದಿ ನೀರು ಪ್ರವಾಹದಂತೆ ಹರಿಯುತ್ತಿದ್ದರೂ ವಾಹನ ನದಿ ನೀರಿನಲ್ಲಿ ರಸ್ತೆ ಮಧ್ಯೆ ಸಿಲುಕಿಕೊಂಡಿದೆ.
ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದಾಗ ವಾಹನ ನೀರಿನಲ್ಲಿ ಸಿಲುಕಿಕೊಂಡಿದ್ದು, ವಾಹನದಲ್ಲಿ ಮದುಮಗ ಸೇರಿ ಹದಿನೈದಕ್ಕೂ ಹೆಚ್ಚು ಜನ ಇದ್ದರು. ಶೀರೂರು ಬಳಿ ಊರಿಗೆ ಊರೇ ಮುಳುಗಡೆಯಾಗಿದ್ದು, ಈ ವೇಳೆ ಮದುವೆ ದಿಬ್ಬಣದ ವಾಹನವೊಂದು ನೀರಿನಲ್ಲಿ ಸಿಲುಕಿಕೊಂಡಿತ್ತು. ನಂತರ ಸ್ಥಳೀಯರ ಸಹಕಾರದಿಂದ ಮದುಮಗ ಸೇರಿ ಎಲ್ಲರನ್ನೂ ಬಚಾವ್ ಮಾಡಲಾಗಿದೆ.
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ವಾಟ್ಸ್ಆ್ಯಪ್ನಿಂದ ಹೊಸ ಅಪ್ಡೇಟ್: ಇನ್ಮುಂದೆ ಸ್ಕ್ರೀನ್ ಶೇರ್ ಮಾಡಬಹುದು