ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರೀತಿಸಿ ವಂಚಿಸಿದ ಬಿಜೆಪಿ ಕಾರ್ಯಕರ್ತ- ವಿಷ ಸೇವಿಸಿ ಯುವತಿ ಆತ್ಮಹತ್ಯೆ

Twitter
Facebook
LinkedIn
WhatsApp
WhatsApp Image 2023 01 15 at 12.58.14 PM 696x391 1

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳಸ ತಾಲೂಕಿನ ಕುದುರೆಮುಖ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಳಸ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ದೀಪ್ತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.

ಜನವರಿ 10 ರಂದು ಮನೆಯಲ್ಲಿದ್ದ ಕಳೆ ನಾಶಕ ಸೇವಿಸಿದ್ದಳು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆ ಹಿನ್ನೆಲೆಯಲ್ಲಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ನಿನ್ನೆ ಚಿಕಿತ್ಸೆ ಫಲಿಸದೆ ದೀಪ್ತಿ ಸಾವನ್ನಪ್ಪಿದ್ದಾಳೆ.

ಆದ್ರೆ ಸಾವಿಗೆ ಶರಣಾಗಿರುವ ವಿದ್ಯಾರ್ಥಿನಿ ದೀಪ್ತಿ, ಬಿಜೆಪಿ ಕಾರ್ಯಕರ್ತನ ವಿರುದ್ಧ ಡೆತ್​ನೋಟ್​ನಲ್ಲಿ ಗಂಭೀರ ಆರೋಪ ಮಾಡಿದ್ದಾಳೆ. ಬಿಜೆಪಿ ಕಾರ್ಯಕರ್ತ ನಿತೇಶ್ ನನ್ನನ್ನು ಪ್ರೀತಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ.

ಈ ಬಗ್ಗೆ ದೂರು ನೀಡಲು ಹೋದರೆ ಕುದುರೆಮುಖ ಪೊಲೀಸರು ಸ್ವೀಕರಿಸಿಲ್ಲ ಎನ್ನಲಾಗಿದೆ. ಇದರಿಂದ ನೊಂದ ಪೋಷಕರು, ಎಸ್​ಪಿ ಮೊರೆ ಹೋಗಿದ್ದಾರೆ. ಕೊನೆಗೆ ಕುದುರೆಮುಖ ಪೊಲೀಸರಿಗೆ ಎಸ್​ಪಿ ಕ್ಲಾಸ್​ ತೆಗೆದುಕೊಂಡಿದ್ದಾರೆ. ತೀವ್ರ ತರಾಟೆ ಬಳಿಕ ಪೊಲೀಸರು ನಿತೇಶ್ ವಿರುದ್ಧ ಕೇಸ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ