ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫೆ 6ರಂದು ಪ್ರಧಾನಿ ಮೋದಿ ಕರ್ನಾಟಕಕ್ಕೆ-ತಿಂಗಳ ಅಂತರದಲ್ಲಿ ಎರಡನೇ ಭೇಟಿ

Twitter
Facebook
LinkedIn
WhatsApp
dfv 3

ಬೆಂಗಳೂರು, ಜ 31 : ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 6ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ಬಿಜೆಪಿಯಲ್ಲಿ ಸಿದ್ದತೆಗಳು ಶುರುವಾಗಿದೆ. ಒಂದು ತಿಂಗಳ ಅವಧಿಯಲ್ಲಿ ಇದು ರಾಜ್ಯಕ್ಕೆ ಪ್ರಧಾನಿ ಮೋದಿಯವರ ಎರಡನೇ ಭೇಟಿಯಾಗಿದೆ.

ಅಂದು ದಿನವಿಡೀ ಪ್ರಧಾನಿ ರಾಜ್ಯದಲ್ಲೇ ಇರಲಿದ್ದಾರೆ. ಬಿಐಇಸಿಯಲ್ಲಿ ಫೆಬ್ರವರಿ 6ರಿಂದ 8ರವರೆಗೆ ನಡೆಯುವ ಇಂಡಿಯಾ ಎನರ್ಜಿ ವೀಕ್‌ ಕಾರ್ಯಕ್ರಮಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ ಗುಬ್ಬಿ ತಾಲೂಕಿನ ಬಿದರಹಳ್ಳಿ ಕಾವಲ್‌ನಲ್ಲಿ ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿ., (ಎಚ್‌ಎಎಲ್‌) ಹೆಲಿಕಾಪ್ಟರ್‌ ತಯಾರಿಕಾ ಕಾರ್ಖಾನೆ ಲೋಕಾರ್ಪಣೆ ಮಾಡಲಿದ್ದಾರೆ. ತಿಪಟೂರಿನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಜಲಜೀವನ್‌ ಮಿಷನ್‌ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಕಳೆದ ಜನವರಿ 12ರಂದು ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಹುಬ್ಬಳ್ಳಿಯಲ್ಲಿ ನಡೆದ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ