ಬಂಟ್ವಾಳ: ಬಿಜೆಪಿ ತನ್ನ ಚುನಾವಣಾ ರಣತಂತ್ರವನ್ನು ಮಂಗಳೂರಿನಲ್ಲಿ ಪರಿಣಾಮಕಾರಿಯಾಗಿಸಿದ್ದು, ಬಿಲ್ಲವ ನಾಯಕ, ಬಂಟ್ವಾಳದ ಪುರಸಭಾ ಸದಸ್ಯ ಗಂಗಾಧರ ಪೂಜಾರಿ ರವರನ್ನು ಬಿಜೆಪಿಯತ್ತ ಸೆಳೆಯಲು ಬಿಜೆಪಿ ಯಶಸ್ವಿ ಕಂಡಿದೆ.
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!
Twitter
Facebook
LinkedIn
WhatsApp

ಕವಿತಾ ಸನಿಲ್ ನಂತರ ಈಗ ಗಂಗಾಧರ್ ಪೂಜಾರಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಬಂಟ್ವಾಳದ ಬಿಸಿ ರೋಡ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕವಿತಾ ಸನಿಲ್ ಮತ್ತು ಬಂಟ್ವಾಳದ ತಾಲೂಕು ಪಂಚಾಯತ್ ಸದಸ್ಯ ಗಂಗಾಧರ ಪೂಜಾರಿ ಅವರು ಬಿಜೆಪಿ ಸೇರಿದ್ದಾರೆ.
ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಕವಿತಾ ಸನಿಲ್ ಅವರು, ನನ್ನ ರಾಜಕೀಯ ಗುರು ಜನಾರ್ದನ ಪೂಜಾರಿ ಆಶೀರ್ವಾದ ಪಡೆದು ಇಲ್ಲಿ ಬಂದಿದ್ದೇನೆ. ಒಳ್ಳೆಯದಾಗೋದಿದ್ದರೆ ಹೋಗು ಅಂತ ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಆಡಳಿತ ಇದೆ, ಏನೋ ಆಸೆ ಇಟ್ಟುಕೊಂಡು ಬಿಜೆಪಿ ಸೇರಿದ್ದೇನೆ ಅಂತ ಅಂದೊಳ್ಳಬೇಡಿ. ಬಿಜೆಪಿಗೆ ಅಧಿಕಾರ ಇಲ್ಲ. ಪ್ರಧಾನಿ ಮೋದಿಯವರ ಆಡಳಿತ ನೋಡಿ ಬಿಜೆಪಿ ಸೇರುತ್ತಿದ್ದೇನೆ. ರಾಜ್ಯದಲ್ಲಿ ಏನಾಗುತ್ತಿದೆ ಅಂತ ನೋಡುತ್ತಿದ್ದೇವೆ ಎಂದು ಹೇಳಿದರು.