ಮಂಗಳವಾರ, ಅಕ್ಟೋಬರ್ 3, 2023
ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!-ರಸ್ತೆ ಬದಿ ಮಲಗಿದ್ದ 10 ಮಂದಿ ಕಾರ್ಮಿಕರ ಮೇಲೆ ಹರಿದ ಟ್ರಕ್ ; 5 ಮಂದಿ ಮೃತ್ಯು - ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಯುವಕನ ಶವ ಪತ್ತೆ - ಆತ್ಮಹತ್ಯೆಯೋ, ಅಪಘಾತವೋ…? ಸಾವಿನ ಸುತ್ತ ಹಲವು ಅನುಮಾನ..!

Twitter
Facebook
LinkedIn
WhatsApp
hr 120123 rajesh

ಬಂಟ್ವಾಳ, ಜ.12 : ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಶವ ಪತ್ತೆಯಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. 

ಬಂಟ್ವಾಳ ತಾಲೂಕಿನ ಸಜೀಪ ನಿವಾಸಿ ರಾಜೇಶ್‌ ಪೂಜಾರಿ ಸ್ಥಾನದ ಮನೆ ಮೃತರಾಗಿದ್ದು, ಅವರ ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.

ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರವಾಹನವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಬಳಿಕ ರಾಜೇಶ್ ಪೂಜಾರಿಯ‌ ಮೃತದೇಹ ಪತ್ತೆಯಾಗಿದೆ. ನ್ಆದರೆ ಮೃತದೇಹ ಪತ್ತೆಯಾದ ಬಳಿಕ ಸಾರ್ವಜನಿಕ ರಲ್ಲಿ ಸಾವಿನ ಬಗ್ಗೆ ಊಹಾಪೋಹಗಳು ಸಂದೇಹಗಳು ಹುಟ್ಟಿ ಕೊಂಡಿದೆ.

ಇನ್ನು ರಾಜೇಶ್ ಅವರು ಸಜೀಪ ಮನೆಯಿಂದ ಬರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ವೇಳೆ ಹಳೆಯ ಪಾಣೆಮಂಗಳೂರು ಸೇತುವೆಯಲ್ಲಿ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ ನೇತ್ರಾವತಿ ನದಿಗೆ ಬಿದ್ದು ಸಾವನ್ನಪ್ಪಿರಬಹುದಾ? ಎಂಬ ಸಂದೇಹ ವ್ಯಕ್ತವಾಗಿದೆ.

ದ್ವಿಚಕ್ರ ವಾಹನ ಅಪಘಾತವಾದ ಬಗ್ಗೆ ಸಂಶಯಗಳು ವ್ಯಕ್ತವಾಗಿದ್ದು, ಪೋಲಿಸರು ತನಿಖೆ ಆರಂಭಿಸಿದ್ದಾರೆ. ಅಥವಾ ಇನ್ನಾವುದೋ ಕಾರಣವಿರಬಹುದಾ ? ಎಂಬ ಬಗ್ಗೆಯೂ ಪೋಲೀಸರು ತನಿಖೆಗೆ ಮುಂದಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ