ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಂಗ್ಲಾದ ಕಾರ್ಖಾನೆಯಲ್ಲಿ ಅಗ್ನಿ ಅವಘಡ; 50 ಕಾರ್ಮಿಕರ ಸಾವು?

Twitter
Facebook
LinkedIn
WhatsApp
ಬಾಂಗ್ಲಾದ ಕಾರ್ಖಾನೆಯಲ್ಲಿ ಅಗ್ನಿ ಅವಘಡ; 50 ಕಾರ್ಮಿಕರ ಸಾವು?

ಡಾಕ:ಬಾಂಗ್ಲಾದೇಶದ ಕಾರ್ಖಾನೆಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಬೆಂಕಿಯಲ್ಲಿ ಸಿಲುಕಿದ ಕನಿಷ್ಟ 50 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ, 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.
ಬಂಗ್ಲಾದೇಶದ ರಾಜಧಾನಿ ಡಾಖಾದ ನಾರ್ಯಾನ್ ಗಂಜ್ ನ ರುಪ್ಗಂಜ್ ನಲ್ಲಿರುವ ಶೆಜಾನ್ ಜ್ಯೂಸ್ ಕಾರ್ಖಾನೆಯಲ್ಲಿ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ನೆಲಮಹಡಿಯಲ್ಲಿ ರಾಸಾಯನಿಕಗಳು ಮತ್ತು ಪ್ಲಾಸ್ಟಿಕ್ ಬಾಟಲಿಗಳು ಇದ್ದ ಕಾರಣ ಅಲ್ಲಿಂದಲೇ ಬೆಂಕಿ ಹೊತ್ತಿಕೊಂಡಿರಬಹುದು ಎಂದುಇ ಅಗ್ನಿಶಾಮಕ ಅಧಿಕಾರಿಗಳು ಶಂಕಿಸಿದ್ದಾರೆ.
ವಿನಾಶಕಾರಿ ಬೆಂಕಿಯಿಂದ ತಪ್ಪಿಸಿಕೊಳ್ಳಲು ಹಲವಾರು ಕಾರ್ಮಿಕರು ಕಟ್ಟಡದಿಂದ ಜಿಗಿದಿದ್ದಾರೆ. ಹಲವಾರು ಜನರು ಕಾಣೆಯಾಗಿದ್ದು, ತಮ್ಮ ಸಂಬಂಧಿಗಳಿಗಾಗಿ ಅವರ ಕುಟುಂಬಸ್ಥರು ಕಟ್ಟಡದ ಬಳಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ಮುಂಭಾಗದ ಗೇಟ್ ಮತ್ತು ಕಾರ್ಖಾನೆಯ ನಿರ್ಗಮನ ಗೇಟ್‌ ಲಾಕ್ ಆಗಿತ್ತು. ಕಟ್ಟಡದಲ್ಲಿ ಸರಿಯಾದ ಅಗ್ನಿ ಸುರಕ್ಷತಾ ಕ್ರಮಗಳಿಲ್ಲ  ಎಂದು ರಕ್ಷಿಸಲ್ಪಟ್ಟ ಕಾರ್ಮಿಕರು ಮತ್ತು ಸಂಬಂಧಿಕರು ಆರೋಪಿಸಿದ್ದಾರೆ.
ಕಟ್ಟಡದಲ್ಲಿ 18 ಅಗ್ನಿಶಾಮಕ ಘಟಕಗಳು ಬೆಂಕಿಯನ್ನ ನಂದಿಸಲು ಹೆಣಗಾಡುತ್ತಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು