ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಗೂ ಪೊಲೀಸರಿಂದ ನೋಟಿಸ್.

Twitter
Facebook
LinkedIn
WhatsApp
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಗೂ ಪೊಲೀಸರಿಂದ ನೋಟಿಸ್.

ನಟಿ ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಸಂಕಷ್ಟಗಳ ಸರಣಿ ಮುಂದುವರಿದಿದೆ. ಒಂದೆಡೆ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರು ಅಶ್ಲೀಲ ಸಿನಿಮಾ ದಂಧೆಯಲ್ಲಿ ಪ್ರಮುಖ ಆರೋಪಿಯಾಗಿ ಪೊಲೀಸರ ಅತಿಥಿ ಆಗಿದ್ದಾರೆ. ಇನ್ನೊಂದೆಡೆ ಶಿಲ್ಪಾ ಶೆಟ್ಟಿ ಹಾಗೂ ಅವರ ತಾಯಿ ಸುನಂದಾ ಶೆಟ್ಟಿ ಮೇಲೆ ಚೀಟಿಂಗ್​ ಕೇಸ್​ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಶಿಲ್ಪಾಗೆ ನೋಟಿಸ್​ ನೀಡಿದ್ದಾರೆ. ಇಬ್ಬರು ವ್ಯಕ್ತಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದಲ್ಲಿ ಶಿಲ್ಪಾ ಶೆಟ್ಟಿ ಮತ್ತು ಸುನಂದಾ ಶೆಟ್ಟಿ ಈಗ ವಿಚಾರಣೆ ಎದುರಿಸಬೇಕಾಗಿದೆ.

ನಟನೆ ಜೊತೆಗೆ ಶಿಲ್ಪಾ ಶೆಟ್ಟಿ ಅವರು ಫಿಟ್ನೆಸ್​ ಕೇಂದ್ರವನ್ನೂ ನಡೆಸುತ್ತಾರೆ. ಇವೋಸಿಸ್​ ವೆಲ್​ನೆಸ್​ ಎಂಬ ಫಿಟ್ನೆಸ್​ ಕೇಂದ್ರವನ್ನು ಅವರು ಹೊಂದಿದ್ದಾರೆ. ಅದಕ್ಕೆ ಶಿಲ್ಪಾ ಶೆಟ್ಟಿ ಮುಖ್ಯಸ್ಥೆಯಾಗಿದ್ದರೆ, ಅವರ ತಾಯಿ ಸುನಂದಾ ನಿರ್ದೇಶಕಿ ಆಗಿದ್ದಾರೆ. ಅದರ ಶಾಖೆಯನ್ನು ಬೇರೆ ಬೇರೆ ನಗರಗಳಲ್ಲಿ ಆರಂಭ ಮಾಡುವುದು ಅವರ ಪ್ಲ್ಯಾನ್​. ಹೊಸ ಶಾಖೆ ಆರಂಭಿಸುವುದಾಗಿ ಭರವಸೆ ನೀಡಿ, ಇಬ್ಬರು ವ್ಯಕ್ತಿಗಳಿಂದ ಕೋಟ್ಯಂತರ ರೂಪಾಯಿ ಪಡೆದಿರುವ ಶಿಲ್ಪಾ ಮತ್ತು ಸುನಂದಾ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ಜೋಸ್ನಾ ಚೌಹಾಣ್​ ಮತ್ತು ರೋಹಿತ್​ ವೀರ್​ ಸಿಂಗ್​ ಎಂಬುವವರು ದೂರು ದಾಖಲಿಸಿದ್ದರು. ಲಖನೌನ ಹಜರತ್​ಗಂಜ್​ ಮತ್ತು ವಿಭೂತಿ ಖಂಡ್​​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಲು ಲಖನೌ ಪೊಲೀಸರು ಮುಂಬೈಗೆ ಆಗಮಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿತ್ತು. ಈಗ ಲಖನೌ ಪೊಲೀಸರು ಶಿಲ್ಪಾಗೆ ನೋಟಿಸ್​ ನೀಡಿದ್ದಾರೆ.

ಪತಿ ರಾಜ್​ ಕುಂದ್ರಾ ನೀಲಿ ಚಿತ್ರಗಳ ಹಗರಣದಲ್ಲಿ ಸಿಕ್ಕಿ ಬಿದ್ದಿದ್ದರಿಂದ ಶಿಲ್ಪಾ ಶೆಟ್ಟಿಗೆ ಸಾರ್ವಜನಿಕವಾಗಿ ತೀವ್ರ ಮುಜುಗರ ಆಗಿದೆ. ಎಷ್ಟೋ ಪ್ರತಿಷ್ಠಿತ ಕಂಪನಿಗಳಿಗೆ ರಾಯಭಾರಿ ಆಗಿದ್ದ ಅವರು ಈಗ ನಷ್ಟ ಅನುಭವಿಸುವಂತಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು