ಬುಧವಾರ, ಜನವರಿ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಿರಸಿ: ಬಿಜೆಪಿ ಸೇರ್ಪಡೆಗೊಂಡ ಮಾಜಿ ಎಂಎಲ್ಸಿ ಘೋಟ್ನೇಕರ್

Twitter
Facebook
LinkedIn
WhatsApp
S.L.Ghotnekar ಬಿಜೆಪಿ ಸೇರ್ಪಡೆಗೊಂಡ ಮಾಜಿ ಎಂಎಲ್ಸಿ ಘೋಟ್ನೇಕರ್

ಕಾರವಾರ: ರಾಜ್ಯದಲ್ಲಿ ಜೆಡಿಎಸ್‌ನಲ್ಲಿ ಭಿನ್ನಮತ ಏಳುತ್ತಿದ್ದಂತೆ ಇತ್ತ ಜೆಡಿಎಸ್ ನಾಯಕರು ಬಿಜೆಪಿಯತ್ತ ವಾಲುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡ ಹಾಗೂ ಮಾಜಿ ಎಂಎಲ್‌ಸಿ ಎಸ್.ಎಲ್.ಘೋಟ್ನೇಕರ್ ಬಿಜೆಪಿ ಸೇರಿದ್ದಾರೆ.

 

ಶನಿವಾರ ಶಿರಸಿಯ ಬಿಜೆಪಿ ಕಚೇರಿಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ನೇತೃತ್ವದಲ್ಲಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಂಡರು.

ಹಳಿಯಾಳದ ಮರಾಠ ಮುಖಂಡ ಹಾಗೂ ಎರಡು ಬಾರಿ ಎಂಎಲ್‌ಸಿ ಜೊತೆಗೆ ಜಿಲ್ಲಾ KDC ಬ್ಯಾಂಕ್‌ನಲ್ಲಿ ಎರಡು ಬಾರಿ ಅಧ್ಯಕ್ಷರಾಗಿದ್ದ ಎಸ್.ಎಲ್.ಘೋಟ್ನೇಕರ್ ಇದೀಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಹಳಿಯಾಳ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿದ್ದರು.

ಘೋಟ್ನೇಕರ್ ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಂತೆ ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ವಿರೋಧ ವ್ಯಕ್ತಪಡಿಸಿದ್ದು, ಸೇರ್ಪಡೆ ಕಾರ್ಯಕ್ರಮಕ್ಕೂ ಗೈರಾಗಿದ್ದರು‌. ಹೀಗಾಗಿ, ಹಳಿಯಾಳ ಕ್ಷೇತ್ರದಲ್ಲಿ ಬಿಜೆಪಿ ಎರಡು ಹೋಳಂತಾಗಿದ್ದು, ಅಸಮಾಧಾನ ಬುಗಿಲೆದ್ದಿದೆ.

ಬಸವಣ್ಣನವರ ಬಗ್ಗೆ ವಿವಾದಾತ್ಮಕ ಮಾತು: ಸ್ಪಷ್ಟನೆ ನೀಡಿದ ಶಾಸಕ ಯತ್ನಾಳ್

ಬಾಗಲಕೋಟೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಸವಣ್ಣನವರ ಬಗ್ಗೆ ಆಡಿರುವ ವಿವಾದಾತ್ಮಕ ಹೇಳಿಕೆ ಸದ್ಯ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಬಸವಾದಿ ಶರಣರು, ಕಾಂಗ್ರೆಸ್ ನಾಯಕರು ಟೀಕಾಸ್ತ್ರ ಪ್ರಯೋಗ ಮಾಡುತ್ತಿದ್ದಾರೆ. ವಿವಾದ ಹೆಚ್ಚುತ್ತಿದ್ದಂತೆ ಇತ್ತ ಶಾಸಕ ಯತ್ನಾಳ್​, ಸ್ಪಷ್ಟನೆ ನೀಡಿದ್ದಾರೆ.  ಬಸವಣ್ಣನವರಿಗೆ ಕೊನೆಗೆ ಏನಾಗಿತ್ತು ಅಂತ ನಮಗೆ ಗೊತ್ತಿದೆ‌‌. ಸತ್ಯ ಏನಿದೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಜನರಿಗೆ ಗೊತ್ತಿದೆ. ಏಕೆಂದರೆ ಸಾವಿರಾರು ವರ್ಷದಿಂದ ನಮ್ಮ ಹಿರಿಯರು ಹೇಳುತ್ತಾ ಬಂದಿದಾರೆ ಎಂದು ಹೇಳಿದ್ದಾರೆ.

ಜಿಲ್ಲೆಯ ಬನಹಟ್ಟಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಬಸವಣ್ಣನವರ ಬಗ್ಗೆ ಇವರಿಗೆ ಏನು ಗೊತ್ತಿದೆ‌. ವಿಭೂತಿ ಹಚ್ಕೊಂಡು ಓಡಾಡುವವರು ಬಸವಣ್ಣನಿಗೆ ಏನಾದರೂ ಮಾಡಿದಾರಾ? ವೀರಶೈವ ಮಹಾಸಭಾದಾಗ ಏನು ಮಾಡಿದಾರೆ‌‌. ಮೊದಲು ಶಿವಾನುಭವ ಮಂಟಪದ ಬಗ್ಗೆ ಹೋರಾಟ ಮಾಡಿ ಅಂತ ಹೇಳಿ. ಒಬ್ಬರು ಬಾಯಿ ತೆಗೆಯುವುದಿಲ್ಲ.

ಬಸವಣ್ಣನವರ ಶಿವಾನುಭವ ಮಂಟಪದಲ್ಲೇ ದನ ಕಡಿಯುತ್ತಿದ್ದಾರೆ. ಅಖಿಲಭಾರತ ವೀರಶೈವ ‌ಮಹಾ ಸಭಾದಲ್ಲಿ ಈಶ್ವರ ಖಂಡ್ರೆ ಏನು ಮಾಡುತ್ತಿದ್ದಾರೆ. ಎಲ್ಲ ಡೊಂಗಿ ನಾಟಕ ಮಾಡುತ್ತಾ ಬಂದಿದ್ದಾರೆ. ಬಸವಣ್ಣನವರ ಇತಿಹಾಸ ಏನಿದೆ, ಗಾಂಧಿಜೀ ನಾ ಯಾರು ಹೊಡೆದರು. ಬಸವಣ್ಣನವರರನ್ನು ಯಾರು ಹೊಡೆದರು‌‌, ಅಂಬೇಡ್ಕರ್​ಗೆ ಎಷ್ಟು ಅಪಮಾನ ಮಾಡಿದರು ಎಂಬುವುದು ಚರ್ಚೆ ಇದೆ. ಚರ್ಚೆಗೆ ಬೇಕಾದರೆ ಬಾ ಅಂತ ಹೇಳಿ. ಅದು ಬಿಟ್ಟು ವಾಟ್ಸಾಪ್​ನಲ್ಲಿ ಮಂಗನಂತೆ ಮಾತಾಡಿದರೆ ಆಗಲ್ಲ. ಎಲ್ಲರೂ ಅಂಜುವ ಹಾಗೆ ನಾನು ಅಂಜುವ ಮಗನಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ನಾವು ಬಸವಣ್ಣನವರನ್ನು ಒಪ್ಪಿಕೊಂಡಿದ್ದೇವೆ. ಬಸವಣ್ಣನವರ ಇತಿಹಾಸ ನಮಗೆ ಗೊತ್ತಿದೆ‌‌‌. ವಿಜಯಪುರ, ಬಾಗಲಕೋಟೆ ಅವರಿಗೆ ಗೊತ್ತಿದೆ‌‌. ನಿಮ್ಮ ವಂಶಸ್ಥರನ್ನು ಕೇಳಿ ನೋಡಿ. ನಾವು ಬಸವಣ್ಣನವರ ವಿಚಾರದವರು‌ ಬಸವಣ್ಣನವರನ್ನು ನಂಬಿದವರು. ಹೃದಯದಲ್ಲಿ ಒಳ್ಳೆಯದಾಗಲಿ ಅಂತ ಬೇಡಿಕೊಳ್ಳುವವರು. ದೇಶಕ್ಕೆ ಒಳ್ಳೆಯದಾಗೋದಾದರೆ ಹೋಮ, ಹವನ ಕೂಡ ಮಾಡುತ್ತೇವೆ ಎಂದಿದ್ದಾರೆ.

ಬಸವಣ್ಣನವರ ಬಗ್ಗೆ ಇವರಿಗೇನು ಗೊತ್ತಿದೆ. ಸುಮ್ಮನೆ ಒಂದು ಬುಕ್ ಬರೆಯೋದು. ಖಂಡ್ರೆ, ಶಾಮನೂರ,  ಯಡಿಯೂರಪ್ಪ ಮನೆ ಮುಂದೆ ಓಡಾಡುವ ಗಿರಾಕಿ ಇವೆ ಎಲ್ಲಾ ಅಂತ ಬುದ್ದಿಜೀವಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಬಿಎಸ್​ವೈ, ಬಿ ಅಂದರೆ ಭೀಮಣ್ಣ ಖಂಡ್ರೆ, ಎಸ್ ಅಂದರೆ ಶಾಮನೂರು ಶಿವಶಂಕ್ರಪ್ಪ, ವೈ ಅಂದರೆ ಯಡಿಯೂರಪ್ಪ. ಇದೇ ಅಖಿಲಭಾರತ ವೀರಶೈವ ಮಹಾಸಭಾ ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist