ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಲ್ಲಿ ಭೀಕರ ಅಪಘಾತ; ಶಾಸಕರ ಮಗ-ಸೊಸೆ ಸೇರಿ 7 ಮಂದಿ ಭೀಕರ ಸಾವು

Twitter
Facebook
LinkedIn
WhatsApp
ಬೆಂಗಳೂರಲ್ಲಿ ಭೀಕರ ಅಪಘಾತ; ಶಾಸಕರ ಮಗ-ಸೊಸೆ ಸೇರಿ 7 ಮಂದಿ ಭೀಕರ ಸಾವು

ಬೆಂಗಳೂರು ನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತಮಿಳುನಾಡಿನ ಹೊಸೂರು ಕ್ಷೇತ್ರದ ಡಿಎಂಕೆ ಶಾಸಕ ವೈ. ಪ್ರಕಾಶ್‌ ಅವರ ಪುತ್ರ ಮತ್ತು ಸೊಸೆ ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯ ಬಗ್ಗೆ ಬೆಂಗಳೂರು ನಗರ ಪೊಲೀಸರು ತನಿಖೆ ನಡೆಸುತ್ತಿದ್ದು, ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಸಮೀಪ ಮಂಗಳವಾರ ಮುಂಜಾನೆ 1.45ರ ಸುಮಾರಿಗೆ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು, ಫುಟ್‌ಪಾತ್ ಮೇಲೆ ಹತ್ತಿ ಕಂಬಕ್ಕೆ ಡಿಕ್ಕಿಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಬಸಕ್ಕೆ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಒಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ.

ಕಾರಿನಲ್ಲಿದ್ದ ಯಾರೂ ಕೂಡ ಸೀಟ್‌ ಬೆಲ್ಟ್‌ ಧರಿಸಿರಲಿಲ್ಲ. ಕಾರು ಅಪಘಾತಗೊಂಡಾಗ ಏರ್ ಬ್ಯಾಗ್ ಸಹ ಓಪನ್ ಆಗಿಲ್ಲ. ಇದು ಅವರ ಸಾವಿಗೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.  ಮೃತಪಟ್ಟವರನ್ನು ಹೊಸೂರು ಮೂಲದ ಕರುಣಾಸಾಗರ್, ಅವರ ಪತ್ನಿ ಬಿಂದು, ಕೇರಳ ಮೂಲದ ಅಕ್ಷಯ್ ಗೋಯಲ್, ಇಶಿತಾ, ಡಾ.ಧನುಶಾ, ಹುಬ್ಬಳ್ಳಿಯ ರೋಹಿತ್ ಮತ್ತು ಹರ್ಯಾಣದ ಉತ್ಸವ್ ಎಂದು ಗುರುತಿಸಲಾಗಿದೆ.

ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸೆಂಟ್ ಜಾನ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಕಾರಿನಲ್ಲಿದ್ದವರು ಮದ್ಯ ಸೇವಿಸಿದ್ದರೆಯೇ? ಎಂಬುದು ಪರೀಕ್ಷೆ ಬಳಿಕ ತಿಳಿಯಲಿದೆ. ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಆಡುಗೋಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು