ಬುಧವಾರ, ಏಪ್ರಿಲ್ 17, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಬೈಕ್​ ಸವಾರ ಸ್ಥಳದಲ್ಲೇ ಸಾವು: ಮತ್ತಿಬ್ಬರಿಗೆ ಗಾಯ

Twitter
Facebook
LinkedIn
WhatsApp
vbn 1

ಬೆಂಗಳೂರು (ಫೆ.06): ಸಿಲಿಕಾನ್ ಸಿಟಿಯಲ್ಲಿ ಹಿಟ್ ಅಂಡ್ ರನ್ ಗೆ ವ್ಯಕ್ತಿ ಬಲಿಯಾಗಿದ್ದಾನೆ. ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಸಾಗದ ವಿಧಾನಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಅವರ ಸ್ಟಿಕ್ಕರ್‌ ಹೊಂದಿದ್ದ ಕಾರು ಬೈಕ್‌ ಸವಾರನಿಗೆ ಡಿಕ್ಕಿಯಾಗಿದ್ದು, ಕೆಳಗೆ ಬಿದ್ದ ಬೈಕ್‌ ಸವಾರನ ತಲೆಯ ಮೇಲೆ ಕಾರು ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬೈಕ್‌ ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದೆ.ಬೆಂಗಳೂರು ನಗರದಲ್ಲಿ ಟ್ರಾಫಿಕ್‌ ಇದ್ದೇ ಇರುತ್ತದೆ. ಆದರೂ, ಟ್ರಾಫಿಕ್‌ ಇರುವ ಸಾರ್ವಜನಿಕರು ಹೆಚ್ಚಾಗಿ ಓಡಾಡುವ ರಸ್ತೆಯಲ್ಲಿ ಅತಿವೇಗವಾಗಿ ಬಂದ ಶಾಸಕರ ಕಾರು ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದಿದೆ. ಬಳಿಕ ದ್ವಿಚಕ್ರ ವಾಹನ ಸವಾರನ ತಲೆ ಮೇಲೆ ಹರಿದಿದೆ. ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಲಸೂರು ಗೇಟ್ ಟ್ರಾಫಿಕ್ ಪೊಲೀಸರು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆದರೆ, ಈ ದುರ್ಘಟನೆಯಿಂದ ನೃಪತುಂಗ ರಸ್ತೆಯಲ್ಲಿ ಭಾರಿ ಪ್ರಮಾಣದ ಟ್ರಾಫಿಕ್‌ ಜಾಮ್‌ ಉಂಟಾಗಿದೆ. 

ಅತಿವೇಗವಾಗಿ ಬಂದು ಡಿಕ್ಕಿ: ಈ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಮಾಜಿದ್ ಖಾನ್ (39) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ತಲೆ ಮೇಲೆ ಕಾರ್ ಹರಿದಿತ್ತು. ಎಚ್ ಬಿ ಆರ್  ಲೇಔಟ್ ನಿವಾಸಿಯಾಗಿದ್ದ ಮಾಜಿದ್ ಖಾನ್ ಆಟೊ ಮೊಬೈಲ್ಸ್ ಅಂಗಡಿ ಇಟ್ಕೊಂಡಿದ್ದರು. ಮತ್ತೊಬ್ಬ ಗಾಯಾಳು ರಿಯಾಜ್ ಕಾಲು ಮುರಿದಿದ್ದು ತಲೆಗೆ ಗಾಯವಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಎಂ ಎಲ್ ಎ ಹರತಾಳು ಹಾಲಪ್ಪ ಪಾಸ್ ಹೊಂದಿದ್ದ ಕಾರ್ ನಿಂದ ಅಪಘಾತವಾಗಿದೆ. ಅಪಘಾತದ ನಂತರ ಕೂಡಲೇ ಕಾರ್‌ಗೆ ಅಂಟಿಸಿದ್ದ  ಎಂಎಲ್‌ಎ ಹರತಾಳು ಹಾಲಪ್ಪ ಎಂಬ ಕಾರ್ ಸ್ಟಿಕ್ಕರ್ ಅನ್ನು ಬೆಂಬಲಿಗರು ತೆಗೆದಿದ್ದಾರೆ. ಹಲಸೂರು ಗೇಟ್‌ ಪೊಲೀಸ್‌ ಸ್ಟೇಷನ್ ಬಳಿ ಕಾರ್ ಸ್ಟಿಕ್ಕರ್ ತೆಗೆದಿಟ್ಟಿದ್ದಾರೆ. 

ಘಟನೆಯ ಪೂರ್ಣ ವಿವರ: ನೃಪತುಂಗ ರಸ್ತೆಯಲ್ಲಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಬಳಿ ಬೈಕ್ ನಲ್ಲಿ ಇಬ್ಬರು ಸವಾರರು ಹೋಗುತ್ತಿದ್ದರು. ಈ ವೇಳೆ ಇನ್ನೋವಾ ಕಾರ್ ನಿಂದ ಡಿಕ್ಕಿಯಾಗಿದೆ. ಒಬ್ಬರ ತಲೆ ಮೇಲೆ ಕಾರ್ ಹರಿದಿದೆ. ಮತ್ತೊಬ್ಬರ ಕಾಲಿನ ಮೇಲೆ ಕಾರ್ ಹರಿದಿದೆ. ಒಬ್ಬ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ನಂತರ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಳಿದಂತೆ ಘಟನೆಯಲ್ಲಿ ಮೂರ್ನಾಲ್ಕು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. KA 50 MA 6600 ನಂಬರಿನ ಇನ್ನೊವ ಕಾರ್  ಆಗಿದೆ. ಕಾರ್ ನಲ್ಲಿ ಡ್ರೈವರ್ ಮಾತ್ರ ಚಾಲನೆ ಮಾಡುತ್ತಿದ್ದರು. ರಾಮು ಸುರೇಶ್ ಎಂಬುವರ ಹೆಸರಿನಲ್ಲಿರೊ ಕಾರು ಆಗಿದೆ. ಯಲಹಂಕ ರಿಜಿಸ್ಟ್ರೇಷನ್ ನಲ್ಲಿರೊ ಕಾರ್‌ ಆಗಿದ್ದು, ಅಜಾಗರೂಕ ಚಾಲನೆಯಿಂದ ಅಪಘಾತಕ್ಕೆ ಕಾರಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ