Friday, December 2, 2022
ಖ್ಯಾತ ನಿರ್ಮಾಪಕ ಮುರಳೀಧರನ್ ಹೃದಯಾಘಾತದಿಂದ ನಿಧನ; ಕಂಬನಿ ಮಿಡಿದ ಕಮಲ್ ಹಾಸನ್-ನಟ ವಸಿಷ್ಠ ಸಿಂಹ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ನಟಿ ಹರಿಪ್ರಿಯಾ-ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ: ಸುರ್ಜೇವಾಲಾ-6ನೇ ತರಗತಿಯ ಬಾಲಕ ಹೃದಯಾಘಾತದಿಂದ ಸಾವು-ಭಾರತವಿಂದು ಜಗತ್ತಿನ ನಂ.1 ಹಾಲು ಉತ್ಪಾದಕ: ಕೇಂದ್ರ ಸಚಿವ ಪರುಷೋತ್ತಮ ರೂಪಲಾ-ಪ್ರಜಾಪ್ರಭುತ್ವದ ಬಗ್ಗೆ ವಿಶ್ವ ನಮಗೆ ಪಾಠ ಮಾಡಬೇಕಿಲ್ಲ, ವಿಶ್ವಸಂಸ್ಥೆಗೆ ಭಾರತದ ದಿಟ್ಟ ಉತ್ತರ!-ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು-ಸ್ಮಿತ್ ಬ್ಯಾಟ್‍ನಿಂದ ಹೊಡೆತ ತಿಂದ ಅಂಪೈರ್-ಸೇಡು ತೀರಿಸಿಕೊಳ್ಳಲು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ 15ರ ಬಾಲಕ-ಹೊಸ ಆಲೋಚನೆಯ ಅಭಿವೃದ್ಧಿ ಚಿಂತನೆಯ 'ಸಮೃದ್ಧ ಕೊಡಗು' ಪರಿಕಲ್ಪನೆಯ ಮೂಲಕ ಕೊಡಗಿನಲ್ಲಿ ಗಮನ ಸೆಳೆಯುತ್ತಿರುವ ಡಾ. ಮಂತರ್ ಗೌಡ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

'ಬೆನ್ನಿಗೆ ಚೂರಿ ಹಾಕಿದವರು ಸಿಎಂ ಆಗಲಾರರು'-ಪೈಲಟ್ ವಿರುದ್ದ ಗೆಹ್ಲೋಟ್ ಕಿಡಿ

Twitter
Facebook
LinkedIn
WhatsApp

ಪಾಲಿ (ರಾಜಸ್ಥಾನ), ನ 24 : ಬೆನ್ನಿಗೆ ಚೂರಿ ಇರಿದವರು ಮುಖ್ಯಮಂತ್ರಿಯಾಗುವುದು ಅಸಾಧ್ಯ ಎಂಬುದಾಗಿ ರಾಜಸ್ಥಾನ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ವಿರುದ್ದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಕನಿಷ್ಠ 10 ಶಾಸಕರ ಬೆಂಬಲವೂ ಸಚಿನ್ ಪೈಲಟ್‌ಗಿಲ್ಲ. ಅಂತಹವರನ್ನು ಮುಖ್ಯಮಂತ್ರಿ ಮಾಡಲು ಆಗುವುದಿಲ್ಲ. ಪಕ್ಷದ ವಿರುದ್ದ ಬಂಡಾಯ ಎದ್ದು, ಪಕ್ಷಕ್ಕೇ ದ್ರೋಹ ಮಾಡಿದರಲ್ಲದೆ, ಬೆನ್ನಿಗೆ ಚೂರಿ ಹಾಕಿದ ವ್ಯಕ್ತಿ ಅವರು. ಅಂತಹವರನ್ನು ಸಿಎಂ ಮಾಡುವುದು ಸಾಧ್ಯವಿಲ್ಲ ಎಂದು ಗುಡುಗಿದರು.

ತಮ್ಮ ಪಕ್ಷದ ಸರ್ಕಾರವನ್ನು ಸ್ವತಃ ಆ ಪಕ್ಷದ ಅಧ್ಯಕ್ಷರೇ ಉರುಳಿಸಲು ಯತ್ನಿಸದ ಪ್ರಕರಣ ಬಹುಶಃ ದೇಶದಲ್ಲೇ ಮೊದಲು. ಅವರು ಬಂಡಾಯವೆದ್ದ ವೇಳೆ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಲವು ನಾಯಕರು ಬೆಂಬಲ ಮತ್ತು ಹಣಕಾಸಿನ ನೆರವು ಒದಗಿಸಿದ್ದರು ಎಂದು ಗೆಹ್ಲೋಟ್ ಆರೋಪಿಸಿದರು.

2020ರಲ್ಲಿ ಸಚಿನ್ ಪೈಲಟ್ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ19 ಮಂದಿ ಶಾಸಕರೊಂದಿಗೆ ಬಂಡಾಯವೆದ್ದು, ದೆಹಲಿಯ ರೆಸಾರ್ಟ್‌ವೊಂದರಲ್ಲಿ ವಾಸ್ತವ್ಯ ಮಾಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ