ಬುಧವಾರ, ಮಾರ್ಚ್ 29, 2023
ರಾಜ್ಯದ ಅತಿ ಕಿರಿಯ ಮೇಯರ್​: ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್​​​ ಆಗಿ ಡಿ. ತ್ರಿವೇಣಿ ಆಯ್ಕೆ-ಏ.1ರಿಂದ ಸಿಗರೇಟ್, ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚಳ-ಮಂಗಳೂರು: ಸೌದಿಯಲ್ಲಿ ಅಪಘಾತ ಮಲ್ಲೂರಿನ ಯುವಕ ಮೃತ್ಯು-ಮಂಗಳೂರು: ಸೌದಿಯಲ್ಲಿ ಅಪಘಾತ ಮಲ್ಲೂರಿನ ಯುವಕ ಮೃತ್ಯು-ಬೆಳ್ತಂಗಡಿ: ಹೆಂಡತಿಗೆ ಕತ್ತಿಯಿಂದ ಕಡಿದ ಗಂಡ - ಪತ್ನಿಆಸ್ಪತ್ರೆಗೆ, ಪತಿ ರಕ್ತದೊತ್ತಡದಿಂದ ಸಾವು-ಶೋಭಿತಾ ಜೊತೆ ಡೇಟಿಂಗ್‌, ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಾಗಚೈತನ್ಯ-ಸಂಭಾವನೆಗಾಗಿ ಎಂದೂ ಬೇಡಬಾರದು: ನಟಿ ಸಮಂತಾ-ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ, 13ಕ್ಕೆ ಮತ ಎಣಿಕೆ: ಚುನಾವಣಾ ಆಯೋಗ ಘೋಷಣೆ-ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಮುಗಿಸಿದ ಪತ್ನಿ- ತನಿಖೆಯಲ್ಲಿ ಸತ್ಯ ಬಯಲು-ಮಂಗಳೂರು: ಕದ್ರಿ ಜೋಗಿ ಮಠದ ಮತ್ಸ್ಯೇಂದ್ರನಾಥ ಗುಡಿ ಆವರಣದಲ್ಲಿ ಕ್ರಿ.ಶ 1423 ಕಾಲದ ಶಾಸನ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಳ್ತಂಗಡಿ: ಏಕಾಲದಲ್ಲಿ ಉಜಿರೆಯ ಲಾಡ್ಜ್‌‌ಗಳ ಮೇಲೆ ವಿಶೇಷ ಪೊಲೀಸ ತಂಡ ದಾಳಿ

Twitter
Facebook
LinkedIn
WhatsApp
WhatsApp Image 2023 02 07 at 10.49.28 AM 600x330 1

ಬೆಳ್ತಂಗಡಿ, ಫೆ 07 : ಉಜಿರೆಯ ಕೆಲವು ಲಾಡ್ಜ್ ಗಳಲ್ಲಿ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಫೆ.6 ರಂದು ರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸ್ ವರಿಷ್ಠಾಧಿಕಾರಿ( ಎಸ್.ಪಿ.) ಅಮಟೆ ವಿಕ್ರಮ್ ಮಾರ್ಗದರ್ಶನದಲ್ಲಿ ಬಂಟ್ವಾಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ಅವರ ನೇತೃತ್ವದಲ್ಲಿ, ವಿಶೇಷ ತಂಡ ರಚಿಸಿ, ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು ಮತ್ತು ಸಿಬಂದಿಗಳ ತಂಡಗಳು ಏಕಕಾಲದಲ್ಲಿ ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ದಾಳಿ ಮಾಡಿದೆ.

ಇನ್ನು ರಿಜಿಸ್ಟರ್ ಗಳನ್ನು ಪರಿಶೀಲಿಸಿ, ಆಧಾರ್ ಕಾರ್ಡ, ಇತರೆ ದಾಖಲೆಗಳನ್ನು ಪರಿಶೀಲಿಸಿ, ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಮಾಹಿತಿ ಪಡೆದಿದೆ.

ಮುಂದಿನ ದಿನಗಳಲ್ಲಿ ಲಾಡ್ಜ್ ನಲ್ಲಿ ತಂಗುವ ಪ್ರವಾಸಿಗರು ಮತ್ತು ಬಕ್ತರು ಪೂರ್ಣ ಮಾಹಿತಿ ಪಡೆದು ರೂಮ್ ನೀಡಬೇಕು ಹಾಗೂ ಯಾವುದೇ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ನೀಡಬಾರದು ಎಂದು ಸೂಕ್ತ ಎಚ್ಚರಿಕೆ ನೀಡಿ ತೆರಳಿರುವುದಾಗಿ ವರದಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ