ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ ಕಾಂಗ್ರೆಸ್ ನಲ್ಲಿ ರಾಜಕೀಯ ಸ್ಪೋಟ! ಮತ್ತೆ ಸ್ಪರ್ಧೆಗೆ ಸಿದ್ದವಾದ ವಸಂತ ಬಂಗೇರ!

Twitter
Facebook
LinkedIn
WhatsApp
ಬೆಳ್ತಂಗಡಿ ಕಾಂಗ್ರೆಸ್ ನಲ್ಲಿ ರಾಜಕೀಯ ಸ್ಪೋಟ! ಮತ್ತೆ ಸ್ಪರ್ಧೆಗೆ ಸಿದ್ದವಾದ ವಸಂತ ಬಂಗೇರ!

ಬೆಳ್ತಂಗಡಿ: ಯಾವುದೇ ಗದ್ದಲವಿಲ್ಲದೆ ಇದ್ದ ಬೆಳ್ತಂಗಡಿ ಕಾಂಗ್ರೆಸ್ ಕಳೆದ ಒಂದು ತಿಂಗಳಿನಿಂದ ರಾಜಕೀಯವಾಗಿ ಕುದಿಯುತ್ತಿದೆ. ರಾಜಕೀಯ ಸ್ಪೋಟ ಬೆಳ್ತಂಗಡಿಯಲ್ಲಿ ಸಂಭವಿಸಿದೆ ಎಂಬುದು ವರದಿಗಳಿಂದ ತಿಳಿದುಬಂದಿದೆ.

ಕೆಪಿಸಿಸಿ ಮಾಜಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಎಂಟ್ರಿಯಿಂದ ತಣ್ಣಗಿದ್ದ ಬೆಳ್ತಂಗಡಿ ಕಾಂಗ್ರೆಸ್ಸಿನ ರಾಜಕೀಯಕ್ಕೆ ರಂಗೇರಿದೆ. ಈ ಮೊದಲು ಸುಮ್ಮನಿದ್ದ ವಸಂತ ಬಂಗೇರ ರವರು ಈಗ ತೊಡೆತಟ್ಟಿ ಅಖಾಡಕ್ಕೆ ಇಳಿದ ಕಾರಣ ರಾಜಕಾರಣ ಹೊಸ ತಿರುವನ್ನು ಪಡೆದಿದೆ.
ನಾನು ಯಾರಿಗೂ ಆಶೀರ್ವಾದ ಮಾಡಿಲ್ಲ ಹಾಗೂ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ವಸಂತ ಬಂಗೇರ ತನ್ನ ಆಪ್ತರಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ ಎಂಬುದು ತಿಳಿದುಬಂದಿದೆ.

ಈ ಮೂಲಕ ತಾನು ಇನ್ನು ಸ್ಪರ್ಧೆಯಲ್ಲಿ ಇದ್ದೇನೆ ಎಂಬುದನ್ನು ಅವರು ತನ್ನ ಆಪ್ತರಲ್ಲಿ ಹೇಳಿಕೊಂಡಿದ್ದಾರೆ. ತನ್ನ ಇಬ್ಬರು ಪುತ್ರಿ ರೊಂದಿಗೆ ಬೆಳ್ತಂಗಡಿ ತುಂಬೆಲ್ಲ ಕಿಟ್ ವಿತರಣೆಯಲ್ಲಿ ಬಂಗೇರ ತೊಡಗಿಕೊಂಡಿದ್ದಾರೆ. ಅಲ್ಲದೆ ಸ್ವಲ್ಪಕಾಲ ಮುನಿಸಿಕೊಂಡಿದ್ದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ರೊಂದಿಗೆ ಮುನಿಸನ್ನು ಶಮನ ಮಾಡಿ ಹೊಸ ರಾಜಕೀಯಕ್ಕೆ ಮುನ್ನುಡಿ ಬರೆದಿದ್ದಾರೆ. ಅಲ್ಲದೆ ರಂಜನ್ ಗೌಡ ರವರಿಗೆ ಆಪ್ತರಾಗಿರುವ ಬಂಗೇರ ಆ ಮೂಲಕ ಹೊಸ ದಾಳವನ್ನು ಉರುಳಿಸಿ ಬೆಳ್ತಂಗಡಿ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ತೊಡಗಿಕೊಂಡಿದ್ದಾರೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇತ್ತಕಡೆ ಬಿಜೆಪಿ ಶಾಸಕ ಹರೀಶ್ ಪೂಂಜ ಈ ಬೆಳವಣಿಗೆಗಳ ನಡುವೆ ಹೊಸ ತಂತ್ರ ಹೆಣೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ರಾಜಕೀಯಕ್ಕೆ ಎಂಟ್ರಿ ನೀಡಿರುವ ರಕ್ಷಿತ್ ಶಿವರಾಂಗೆ ಹೊಸ ಸವಾಲ್ ಎದುರಾಗಿದ್ದು ಹೇಗೆ ಎದುರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ. ಆದರೆ ಬಂಗೇರ ಸೇರಿ ಇತರರು ಸ್ಪರ್ಧಿಸುವ ಇಂಗಿತ ವ್ಯಕ್ತ ಪಡಿಸಿದ್ದು ಕಾಂಗ್ರೆಸ್ ಒಡೆದ ಮನೆ ಆಗಿರುವುದರಲ್ಲಿ ಸಂಶಯವಿಲ್ಲ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು