ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ: ಬೈಕಿಗೆ ಡಿಕ್ಕಿ ಹೊಡೆದ ಲಾರಿ; ಬೈಕ್ ಸವಾರ ಸಾವು.!
Twitter
Facebook
LinkedIn
WhatsApp

ಬೆಳ್ತಂಗಡಿ: ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಹಳೇಕೋಟೆ ಸಮೀಪ ಪೆಟ್ರೋಲ್ ಪಂಪು ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಬಳ್ಳಮಂಜದ ನಿವಾಸಿ ಜಿ. ವಿನೋದ್ ಎಂದು ಗುರುತಿಸಲಾಗಿದೆ.
ಬೆಳ್ತಂಗಡಿಯ ಹಳೇಕೋಟೆ ಬಳಿಯ ಪೆಟ್ರೋಲ್ ಪಂಪ್ ಬಳಿ ಮಣ್ಣು ಹೇರಿಕೊಂಡು ಹೋಗುತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಲಾರಿಯಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ