ಬೆಳ್ತಂಗಡಿ: ಮನೆಯ ಕೆರೆಗೆ ಜಾರಿ ಬಿದ್ದು ಗರ್ಡಾಡಿಯ ನವವಿವಾಹಿತ ಯುವಕ ಸಾವು..!

ಬೆಳ್ತಂಗಡಿ : 6 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತನೊಬ್ಬ ಮನೆಯ ಕೆರೆಗೆ ಜಾರಿ ಬಿದ್ದು ಸಾವನಪ್ಪಿದ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟದಲ್ಲಿ ನಡೆದಿದೆ.
ಮೃತರನ್ನು ಶೈಲೇಶ್ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಇವರು ಕೃಷಿಕರಾಗಿದ್ದ ಇವರು ಕಳೆದ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ತಮ್ಮ ಮನೆಯ ಕೆರೆಗೆ ಮೇ.25 ಶನಿವಾರ ರಾತ್ರಿ ಸುಮಾರು 8:30 ಕ್ಕೆ ಜಾರಿ ಬಿದ್ದು ಕೆಸರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿ, ಶೈಲೇಶ್ ಶವವನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡ ಬೆಳ್ತಂಗಡಿ ಪೊಲೀಸರು ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ: ವಿದ್ಯಾರ್ಥಿಯ ಖಾತೆಯಿಂದ ಲಕ್ಷಾಂತರ ರೂ. ನಗದು ಅಪಹರಣ; ಪ್ರಕರಣ ದಾಖಲು
ಬೆಳ್ತಂಗಡಿ: ಉಜಿರೆಯ ಕಾಲೇಜೊಂದರ ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ಯಿಂದ ಅಪರಿಚಿತರು ಲಕ್ಷಾಂತರ ರೂಪಾಯಿ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಯು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಜಿರೆ ಕಾಲೇಜೊಂದರಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್ ಸುರೇಶ್ ರೂಗಿ ಎಂಬವವರ ಖಾತೆಯಲ್ಲಿದ್ದ 3.14 ಲಕ್ಷ ರೂ. ಹಣವನ್ನು ಅಪಹರಿಸಲಾಗಿದೆ.
ಮೇ 23 ರ ವರೆಗೆ ವಿದ್ಯಾರ್ಥಿ ಪ್ರದೀಪ್ ಅವರ ಖಾತೆಯಲ್ಲಿ ಹಣವಿತ್ತು. ಆ ಬಳಿಕ ಇವರ ಮೊಬೈಲ್ ಗೆ ಸಂದೇಶಗಳು ಬಂದಿದ್ದು, ಇದರಲ್ಲಿ ಒಟಿಪಿ ಬಂದಿದೆ. ಈ ಸಂದೇಶಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು ಮರುದಿನ ಬೆಳಿಗ್ಗೆ ಖಾತೆಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅವರ ಖಾತೆಯಲ್ಲಿದ್ದ 3,14,000 ರೂ. ವನ್ನು ಯಾವುದೋ ಅನಾಮಧೇಯ ವ್ಯಕ್ತಿಯ ಖಾತೆಗೆ ವರ್ಗಾವಣೆಯಾಗಿರುವುದಕ ತಿಳಿದುಬಂದಿದೆ. ಇನ್ನು ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಜೀವನದಲ್ಲಿ ಜಿಗುಪ್ಸೆ : ನೇಣು ಬಿಗಿದು ಮಹಿಳೆ ಆತ್ಮಹತ್ಯೆ
ಬಂಟ್ವಾಳ: ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಮಹಿಳೆಯೋರ್ವಳು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಡಗಬೆಳ್ಳೂರು ಗ್ರಾಮದಲ್ಲಿ ನಡೆದಿದೆ.
ಬಡಗಬೆಳ್ಳೂರು ಗ್ರಾಮದ ವಾರಟೀಲು ನಿವಾಸಿ ಇಂದಿರಾ ಕುಲಾಲ್ ( 42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.