ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೈಕ್‍ಗೆ ಡಿಕ್ಕಿ ಹೊಡೆದ ಲಕ್ಷ್ಮಣ್ ಸವದಿ ಪುತ್ರನ ಕಾರು – ಬೈಕ್ ಸವಾರ ದುರಂತ ಸಾವು.

Twitter
Facebook
LinkedIn
WhatsApp
ಬೈಕ್‍ಗೆ ಡಿಕ್ಕಿ ಹೊಡೆದ ಲಕ್ಷ್ಮಣ್ ಸವದಿ ಪುತ್ರನ ಕಾರು – ಬೈಕ್ ಸವಾರ ದುರಂತ  ಸಾವು.

ಬಾಗಲಕೋಟೆ: ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ್ ಕಾರ್ ಅಪಘಾತಕ್ಕೆ ಒಳಗಾಗಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ಬೈಕ್ ಸವಾರ ಬಾಗಲಕೋಟೆ ತಾಲೂಕಿನ ಚಿಕ್ಕಹಂಡರಗಲ್ ನಿವಾಸಿ ಕೂಡಲೆಪ್ಪ ಬೋಳಿ(58) ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿ 12 ಜನರು 2 ಕಾರಿನಲ್ಲಿ ಪ್ರವಾಸಕ್ಕೆ ತೆರಳಿ ವಾಪಸಾಗ್ತಿದ್ರು. ವಿಜಯಪುರ ಮಾರ್ಗವಾಗಿ ತೆರಳ್ತಿದ್ದ ಚಿದಾನಂದ ಕಾರು ಹೊಲದಿಂದ ವಾಪಸಾಗುತ್ತಿದ್ದ ಸವಾರ ಕೂಡಲೆಪ್ಪನ ಬೈಕ್ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾನೆ.

ಲಕ್ಷ್ಮಣ ಸವದಿ ಮಗ ಚಿದಾನಂದ ಕೆಎ22 ಎಂಸಿ5151 ನಂ. ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದವು. ಹೀಗಾಗಿ ಸವಾರನನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದ್ರೆ ಆಸ್ಪತ್ರೆಗೆ ಸೇರಿದ ಕೆಲವೇ ಕ್ಷಣಗಳಲ್ಲಿ ಕೂಡಲೆಪ್ಪ ಮೃತಪಟ್ಟಿದ್ದಾರೆ. ವಿಪರ್ಯಾಸವೆಂದರೆ ಬೈಕ್‌ಗೆ ಡಿಕ್ಕಿ ಬಳಿಕ ಸವಾರನನ್ನು ಆಸ್ಪತ್ರೆಗೆ ಸೇರಿಸುವ ಬದಲು ತಮ್ಮ ವಾಹನದ ನಂಬರ್ ಜಖಂಗೊಳಿಸಿ ಹೊರಡಲು ಯತ್ನಿಸಿದ್ದಾರೆ. ಚಿದಾನಂದ ಮತ್ತೊಂದು ವಾಹನದಲ್ಲಿ ತೆರಳಲು ಮುಂದಾಗಿದ್ದ. ಅಪಘಾತ ಮಾಡಿದ ಕಾರು ಯಾರದ್ದೆಂದು ತಿಳಿಯದಂತೆ ನೋಡಿಕೊಳ್ಳಲು ಪ್ರಯತ್ನಿಸಿದ್ದಾನೆ. ಆದ್ರೆ ಸ್ಥಳೀಯರು ಚಿದಾನಂದನನ್ನು ತಪ್ಪಿಸಿಕೊಳ್ಳಲು ಬಿಡದೆ ಕೆಲಹೊತ್ತು ಹಿಡಿದು ಕೂರಿಸಿದ್ದಾರೆ. ಬಳಿಕ ಹುನಗುಂದ ಪೊಲೀಸರು ಚಿದಾನಂದನನ್ನು ಬಿಡಿಸಿ ಕಳಿಸಿದ್ದಾರೆ. ಈ ಬಗ್ಗೆ ಹುನಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿದಾನಂದ ಬದಲು ಚಾಲಕ ಹನುಮಂತ ಸಿಂಗ್ ಹೆಸರಲ್ಲಿ ದೂರು ದಾಖಲಾಗಿದೆ. ಅಪಘಾತ ಬಳಿಕ ಮೃತನ ಸಂಬಂಧಿಕರಿಗೆ ನಾನು ಡಿಸಿಎಂ ಮಗ ಹುಷಾರ್ ಎಂದು ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮೃತನ ಸಂಬಂಧಿಕರು ಚಿದಾನಂದ ಸವದಿ ವಿರುದ್ಧ ಬೆದರಿಕೆ ಆರೋಪ ಮಾಡಿದ್ದಾರೆ. ಅಪಘಾತದ ಬಳಿಕ ತಮ್ಮ ಕಾರಿನ ನಂಬರ್ ಪ್ಲೇಟ್ ಜಖಂಗೊಳಿಸಿ ಬಳಿಕ ಮತ್ತೊಂದು ವಾಹನದಲ್ಲಿ ತೆರಳಲು ಯತ್ನಿಸಿದ್ದಾರೆ ಎಂದು ಮೃತ ಕೂಡಲೆಪ್ಪ ಬೋಳಿ ಸಂಬಂಧಿ ಸಿದ್ದಪ್ಪ ತಿಳಿಸಿದ್ದಾರೆ. ಅಪಘಾತವಾದ ಕಾರಿನ ನಂಬರ್ ಪ್ಲೇಟ್, ದಾಖಲೆಗಳನ್ನು ಮತ್ತೊಂದು ವಾಹನದಲ್ಲಿ ಹಾಕಿ ಪರಾರಿಯಾಗಲು ಯತ್ನಿಸಿದ್ರು. ಈ ವೇಳೆ ಕೂಡಲೆಪ್ಪ ಮಕ್ಕಳು, ಸ್ಥಳೀಯರು ಬಂದ್ರು. ಬಳಿಕ ಯುವಕನೊಬ್ಬ ಚಿದಾನಂದನ ಕಾರಿನ ಫೋಟೋ ತೆಗೆದಿದ್ದ. ಆಗ ಯುವಕನಿಗೆ ಚಿದಾನಂದ ಸವದಿ ಬೆದರಿಕೆ ಹಾಕಿ ಮೊಬೈಲ್‌ನಲ್ಲಿದ್ದ ಫೋಟೋ ಡಿಲೀಟ್ ಮಾಡಿದ್ದಾರೆ ಎಂದು ಸಿದ್ದಪ್ಪ ಹೇಳಿದ್ರು.

ಮನೆ ದೇವರಾಣೆಗೂ ನಾನು ಯಾರಿಗೂ ಧಮ್ಕಿ ಹಾಕಿಲ್ಲ. ಆಕಸ್ಮಿಕವಾಗಿ ಕಾರಿಗೆ ಅಡ್ಡಬಂದಿದ್ದರಿಂದ ಅಪಘಾತವಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಮಗ ಚಿದಾನಂದ ಹೇಳಿಕೆ ನೀಡಿದ್ದಾರೆ. ಅಪಘಾತವಾದ ಕಾರಿನಲ್ಲಿ ನಾನು ಇರಲಿಲ್ಲ. ಅಪಘಾತವಾಗಿರುವುದು ನಿಜ, ಸ್ಥಳದಲ್ಲಿ ಯಾರೂ ಇರಲಿಲ್ಲ. ಅಪಘಾತವಾದ ತಕ್ಷಣ ಆ್ಯಂಬುಲೆನ್ಸ್‌ಗೆ ಕರೆ ಮಾಡಿ ಅವರನ್ನು ನಾನೇ ಆಸ್ಪತ್ರೆಗೆ ದಾಖಲಿಸಿದ್ದೆ. ದೇವರಾಣೆಗೂ ನಾನೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದೆ. ಮಾನವೀಯತೆ ದೃಷ್ಟಿಯಿಂದ ಮೃತನ ಕುಟುಂಬಕ್ಕೆ ನಾನು ಸಹಾಯವನ್ನು ಮಾಡುತ್ತೇನೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಮಗ ಚಿದಾನಂದ ಹೇಳಿದ್ರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು