
ಗದಗ: ನರಗುಂದ ತಾಲೂಕಿನ ಭೈರನಹಟ್ಟಿ ಬಳಿ ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿದ್ದ ದಂಪತಿಗಳಿಬ್ಬರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಹಾಗೂ ಬೈಕ್ ಎರಡೂ ಸುಟ್ಟು ಭಸ್ಮವಾಗಿವೆ.
ಹುಬ್ಬಳ್ಳಿ ಮೂಲದ ಬೈಕ್ ಸವಾರ 45 ವರ್ಷದ ಸಹದೇವಪ್ಪ ದೇವರಮನಿ ಹಾಗೂ 36 ವರ್ಷದ ದೀಪಾ ದೇವರಮನೆ ಮೃತ ದಂಪತಿಗಳು. ಇಬ್ಬರ ಮದುವೆಯಾಗಿ 15 ವರ್ಷವಾದರೂ ಮಕ್ಕಳಾಗಿರಲಿಲ್ಲ. ಮಕ್ಕಳ ಹರಕೆಗಾಗಿ ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮದ ದೇವರಿಗೆ ಪ್ರತಿ ಅಮವಾಸ್ಯೆಗೆ ಹೋಗುತ್ತಿದ್ದರು. ಇನ್ನು ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ಕಾರು ಸರ್ವಿಸ್ ಗಾಗಿ ಹುಬ್ಬಳ್ಳಿ ಗೆ ಹೊರಟಿತ್ತು. ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.
ಕಾರಿ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಗೆ ದಾಖಲು ಮಾಡಲಾಗಿದೆ. ಢಿಕ್ಕಿ ರಭಸಕ್ಕೆ ಸ್ಪೋಟಗೊಂಡು ಉರಿದ ವಾಹನಗಳ ಬೆಂಕಿಯನ್ನುಅಗ್ನಿಶಾಮಕ ದಳದ ಸಿಬ್ಬಂದಿಗಳು ನಂದಿಸಲು ಯತ್ನಿಸಿದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!