ಬ್ರಹ್ಮಾವರ: ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ವಿದ್ಯಾರ್ಥಿಗಳಿಬ್ಬರು ಅಪಘಾತದಲ್ಲಿ ಮೃತ್ಯು
ಬ್ರಹ್ಮಾವರ, ಜ 17: ಇಲ್ಲಿನ ದೂಪದಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಮೂಲತಃ ಶಿವಮೊಗ್ಗ ನಿವಾಸಿ ಸಮಿತ್ ಕುಮಾರ್(19) ಹಾಗೂ ಸಾಲಿಗ್ರಾಂ ಚಿತ್ರಪಾಡಿ ನಿವಾಸಿ ವಾಗೀಶ್ ಕೆದ್ಲಾಯ(19) ಎಂದು ಗುರುತಿಸಲಾಗಿದೆ. ಇವರಿಬ್ಬರು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು.
ಇವರು ಕಾಲೇಜು ಮುಗಿಸಿ ರಾತ್ರಿ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮುಂಬಾಗದಲ್ಲಿದ್ದ ಲಾರಿಯನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಬೈಕ್ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿ ಬೈಕ್ ರಸ್ತೆಗೆ ಬಿದ್ದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ಇವರಿಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಮಿತ್ ಮತ್ತು ವಾಗೀಶ್ ಮಿತ್ರರಾಗಿದ್ದು ಪ್ರತಿಭಾನ್ವಿತರು. ಇಬ್ಬರದೂ ಬಡ ಕುಟುಂಬವಾಗಿದ್ದು, ಹಗಲು ಸಿಎ ಅಭ್ಯಾಸ ನಡೆಸುತ್ತಿದ್ದರೆ, ಸಂಜೆ ತರಗತಿ ಮೂಲಕ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಪ್ರಸ್ತುತ ಎರಡನೇ ವರ್ಷದ ವಿದ್ಯಾರ್ಥಿಗಳಾಗಿದ್ದರು