ಮಂಗಳವಾರ, ಡಿಸೆಂಬರ್ 5, 2023
ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!-ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!-ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!-ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!-ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?-ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ-Gold Rate : ದುಬಾರಿಯತ್ತ ಬಂಗಾರದ ಬೆಲೆ ; ಇಂದಿನ ಚಿನ್ನದ ದರ ಹೇಗಿದೆ?-8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!-ದಿವ್ಯಾಂಗರು, ಅಂಗವಿಕಲರ ಕಲ್ಯಾಣದ ಮಹತ್ವದ ವಿಷಯದ ಕುರಿತಂತೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್-ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತೀಯ ಸೈನ್ಯಕ್ಕೆ ಅಪಮಾನ: ನಟಿ ರಿಚಾ ಚಡ್ಡಾ ಕ್ಷಮೆಯಾಚನೆ

Twitter
Facebook
LinkedIn
WhatsApp
ಭಾರತೀಯ ಸೈನ್ಯಕ್ಕೆ ಅಪಮಾನ: ನಟಿ ರಿಚಾ ಚಡ್ಡಾ ಕ್ಷಮೆಯಾಚನೆ

ಗಾಲ್ವಾನ್ ಹಾಯ್ ಎಂದು ಟ್ವಿಟ್ ಮಾಡುವ ಮೂಲಕ ಭಾರತೀಯ ಸೈನ್ಯಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟಿ ರಿಚಾ ಚಡ್ಡಾ ಕೊನೆಗೂ ಕ್ಷಮೆ ಕೇಳಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರ ವಶಕ್ಕೆ ಸೇನೆ ಸಿದ್ಧವಾಗಿ ಎಂದು ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಹೇಳಿಕೆ ನೀಡಿದ್ದರು. ಅದನ್ನು ಅವಮಾನಿಸುವಂತೆ ರಿಚಾ ಟ್ವಿಟ್ ಮಾಡಿದ್ದರು. ಇದು ಭಾರೀ ಸದ್ದು ಮಾಡಿತ್ತು. ಅಕ್ಷಯ್ ಕುಮಾರ್ ಸೇರಿದಂತೆ ಹಲವರು ರಿಚಾ ನಡೆಯನ್ನು ಖಂಡಿಸಿದ್ದರು.

ಭಾರತೀಯ ಸೇನೆಯ ವಿಚಾರದಲ್ಲಿ ಟ್ವೀಟ್ ಮಾಡಿ ಬಾಲಿವುಡ್ ನಟಿ ರಿಚಾ ಚೆಡ್ಡಾ ವಿವಾದದ‌‌ ಕೇಂದ್ರ ಬಿಂದುವಾಗಿದ್ದು, ನೆಟ್ಟಿಗರಿಂದ ತೀವ್ರ ಟೀಕೆಗೆ ಗುರಿಯಾಗಿದ್ದರು. ದೇಶದ ಸೈನಿಕರಿಗೆ ಅಗೌರವ ತೋರಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಸೋಷಿಯಲ್ ಮೀಡಿಯಾ ಮೂಲಕ ನಟಿಗೆ ಚಳಿ ಬಿಡಿಸುದ್ದರು.

ಪಾಕ್ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯಲು ಭಾರತೀಯ ಸೇನೆ ಸನ್ನದ್ದವಾಗಿದೆ ಎಂದು ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಟ್ಯಾಗ್ ಮಾಡಿದ್ದ ನಟಿ ಗಾಲ್ವಾನ್ ಹಾಯ್ ಹೇಳುತ್ತಿದೆ ಎಂದು ಬರೆದುಕೊಂಡಿದ್ದರು. ಅವರ ಬರವಣಿಗೆ ಸೇನೆಗೆ ತೋರುವ ಅಗೌರವ ಎಂದು ಬಣ್ಣಿಸಲಾಗುತ್ತಿದೆ. ಹಾಗಾಗಿಯೇ ನಟಿಯ ವಿರುದ್ಧ ದೇಶಭಕ್ತರು ತಿರುಗಿ ಬಿದ್ದಿದ್ದರು. 

ರಿಚಾ ಚೆಡ್ಡಾ ಹೀಗೆ ಟ್ವೀಟ್ ಮಾಡುತ್ತಿದ್ದಂತೆಯೇ ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದರು. ಗಾಲ್ವಾನ್ ಘರ್ಷಣೆಯಲ್ಲಿ ಜೀವತೆತ್ತ ಸೈನಿಕರಿಗೆ ನಟಿ ಅವಮಾನ ಮಾಡಿದ್ದಾರೆ ಎಂದು ಕೆಲವು ಆರೋಪಿಸಿದರೆ, ಇನ್ನು ಕೆಲವರು ಇದು ಭಾರತೀಯ ಸೇನೆಯನ್ನು ಅವಮಾನ ಮಾಡುವ ಪ್ರಯತ್ನ ಎಂದು ಜರಿದಿದ್ದರು. ಅಲ್ಲದೇ, ಇಂತವರನ್ನು ಸುಮ್ಮನೆ ಬಿಡಬಾರದು ಎಂದು ಕೆಲವರು ಆಕ್ರೋಶ ವ್ಯಕ್ತ ಪಡಿಸಿದ್ದರು.

ಟ್ವೀಟ್ ಆಧಾರದ ಮೇಲೆ ನಟಿ ವಿರುದ್ಧ ದೂರು ದಾಖಲಾಗಿದೆ. ಭಾರತೀಯ ಸೇನೆಯನ್ನು ಅಪಹಾಸ್ಯ ಮಾಡಿದ ರಿಚಾ ಅವರ ವಿವಾದಾತ್ಮಕ ಟ್ವೀಟ್ ವಿರುದ್ಧ ವಕೀಲ ವಿನೀತ್ ಜಿಂದಾಲ್ ಅವರು ಸಿಪಿ ದೆಹಲಿಗೆ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇತ್ತ ಹೇಳಿಕೆ ವಿವಾದಾತ್ಮಕ ಸ್ವರೂಪ ಪಡೆಯುತ್ತಿದ್ದಂತೆ ರಿಚಾ ಚೆಡ್ಡಾ ಟ್ವಿಟ್ಟರ್ ನಲ್ಲಿ ರಿಪ್ಲೆಗಳನ್ನು ಮ್ಯೂಟ್ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ