ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತ್ ಜೋಡೋ ಸಮಾರೋಪ: ಕಾಶ್ಮೀರದ ಹಿಮಸೌಂದರ್ಯಕ್ಕೆ ಮಾರುಹೋದ ಡಿ.ಕೆ. ಶಿವಕುಮಾರ್

Twitter
Facebook
LinkedIn
WhatsApp
Screenshot 2023 01 30 111439 1024x579 1

ಶ್ರೀನಗರ (ಜ.30): ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ಹಾಗೂ ದೇಶದ ಜ್ವಲಂತ ಸಮಸ್ಯೆಗಳ ಕುರಿತು ಜನಪರ ಧ್ವನಿ ಎತ್ತಲು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಐತಿಹಾಸಿಕ ಭಾರತ ಜೋಡೋ ಯಾತ್ರೆ ಸೋಮವಾರ ಸಂಪೂರ್ಣವಾಗುತ್ತಿದೆ. ಈ ಸಮಾರೋಪ ಕಾರ್ಯಕ್ರಮಕ್ಕೆ ಹೋಗಿರುವ ಡಿ.ಕೆ. ಶಿವಕುಮಾರ್ ಕಾಶ್ಮೀರದ ಹಿಮಸೌಂದರ್ಯಕ್ಕೆ ಮನಸೋತು ವೀಡಿಯೋ ಹಂಚಿಕೊಂಡಿದ್ದಾರೆ.

ಕಳೆದ ಐದು ತಿಂಗಳಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುದೀರ್ಘ 3570 ಕಿ.ಮೀ. ಸಾಗಿದ ಈ ಯಾತ್ರೆ ದೇಶದ ಇತಿಹಾಸದ ಪುಟ ಸೇರಿದೆ. ಹೊಸ ಮೈಲುಗಲ್ಲು ಸೃಷ್ಟಿಸಿದೆ. ವಿಭಿನ್ನ ಹವಾಮಾನಗಳ ವೈಪರಿತ್ಯ ಸವಾಲು, ರಾಜಕೀಯ ಎದುರಾಳಿಗಳ ಟೀಕೆ, ಷಡ್ಯಂತ್ರ, ಅಪಪ್ರಚಾರ ಸೇರಿದಂತೆ ಎಲ್ಲ ಅಡೆತಡೆಗಳನ್ನು ಮೀರಿ ಯಾತ್ರೆ ತನ್ನ ಗುರಿ ತಲುಪಿದೆ. ಇದು ಕಾಂಗ್ರೆಸ್ ಹಾಗೂ ಪಕ್ಷದ ನಾಯಕರಿಗೆ ದೇಶದ ಬಗ್ಗೆ ಇರುವ ಕಾಳಜಿ, ಬದ್ಧತೆಗೆ ಸಾಕ್ಷಿಯಾಗಿದೆ. 

ಕಾಶ್ಮೀರದಲ್ಲಿ ಇಂದು ಭಾರತ ಜೋಡೋ ಯಾತ್ರೆ ಸಮಾರೋಪ ಸಮಾರಂಭ ನಡೆಯುತ್ತಿದ್ದು,  ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೇರಿದಂತೆ ಪ್ರಮುಖ ನಾಯಕರು ಕಣಿವೆ ರಾಜ್ಯಕ್ಕೆ ತೆರಳಿದ್ದಾರೆ. ಕಾಶ್ಮೀರದ ಶ್ರೀನಗರಕ್ಕೆ ತೆರಳಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್‌ ಕಾಶ್ಮೀರದ ಹಿಮಪಾತ, ಪ್ರಕೃತಿ ಸೌಂದರ್ಯ ಹಾಗೂ ಭಾರತ್‌ ಜೋಡೋ ಯಾತ್ರೆಯ ಕುರಿತ ಪಾದಯಾತ್ರೆಯ ದಾಖಲೆಯ ಬಗ್ಗೆ ಸ್ವತಃ ವೀಡಿಯೋ ಮಾಡಿ ಹಂಚಿಕೊಂಡಿದ್ದಾರೆ.

ದೇಶದ ಐಕ್ಯತೆಗೆ ರಾಹುಲ್ ಗಾಂಧಿ ಅವರ ಯಾತ್ರೆ ಯಶಸ್ವಿ: ‘ಭಾರತ ಜೋಡೋ ಯಾತ್ರೆ ಅಂತಿಮ ದಿನ ನಾವೆಲ್ಲ ಕಾಶ್ಮೀರದ ಶ್ರೀನಗರಕ್ಕೆ ಆಗಮಿಸಿದ್ದೇವೆ. ದೇಶವನ್ನು ಒಗ್ಗೂಡಿಸಿ, ದೇಶದ ಐಕ್ಯತೆಗೆ ರಾಹುಲ್ ಗಾಂಧಿ ಅವರು ಈ ಯಾತ್ರೆ ಆರಂಭಿಸಿದ್ದು, ಇಂದು ಯಾತ್ರೆಯ ಅಂತಿಮ ದಿನವಾಗಿದೆ. ಈ ಸಮಾರೋಪ ಕಾರ್ಯಕ್ರಮಕ್ಕೆ ಸುಮಾರು 100 ಸಂಸದರು, ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯರು, ಪ್ರಮುಖ ನಾಯಕರು ಸೇರಿದಂತೆ ಸಾವಿರಾರು ಮಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದೇವೆ ಎಂದು ಮಾಹಿತಿಯನ್ನು ನೀಡಿದರು.

ಅಲ್ಲಿನ ಹಿಮದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಡಿಕೆಶಿ: ಭಾರತ್‌ ಜೋಡೋ ಯಾತ್ರೆ ರುವಾರಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಜತೆ ಊಟ ಮುಗಿಸಿ ನಮ್ಮ ಕೊಣೆಗೆ ಬಂದು ಮಲಗುವಷ್ಟರಲ್ಲಿ ರಾತ್ರಿ 1 ಗಂಟೆ ಆಗಿತ್ತು. ರಾತ್ರಿ ಇಲ್ಲಿನ ಹವಾಮಾನ 9° ಸೆಲ್ಸಿಯಸ್ ಇತ್ತು. ಬೆಳಗಿನ ಜಾವ 2 ಗಂಟೆ ನಂತರ ಹಿಮ ಸುರಿಯಲು ಆರಂಭವಾಗಿದ್ದು, ಇಡೀ ಪ್ರದೇಶ ಹಿಮದಿಂದ ತುಂಬಿದೆ. ಇಂದು ಬೆಳಗ್ಗೆ ಕೊಠಡಿಯ ಹೊರಗೆ ಬಂದು ನೋಡಿದಾಗ ನನ್ನ ಜೀವನದಲ್ಲಿ ಎಂದೂ ನೋಡಿರದ ಹಿಮಪಾತ ಹಾಗೂ ಅದರ ಸೌಂದರ್ಯ ಮನಸೂರೆಗೊಂಡಿದೆ. ಧಾರಾಕಾರ ಮಳೆಯಂತೆ ಹಿಮ ಸುರಿಯುತ್ತಿದೆ. ಹಿಂದೆಂದೂ ನಾನು ಈ ರೀತಿಯ ಅದ್ಭುತ ದೃಶ್ಯ ಕಂಡಿರಲಿಲ್ಲ. ನಾನು ಈ ಹಿಂದೆ ಸ್ವಿಜರ್ಲೆಂಡ್ ಮತ್ತಿತರ ದೇಶಗಳಿಗೆ ಭೇಟಿ ನೀಡಿದ್ದೇನೆ. ಆದರೆ ಇಂದು ನನಗೆ ಆಗಿರುವ ಪ್ರಕೃತಿ ಸೌಂದರ್ಯದ ಅನುಭವ ಹಿಂದೆಂದೂ ಆಗಿರಲಿಲ್ಲ. ಇದನ್ನು ಎಂದು ಮರೆಯಲು ಸಾಧ್ಯವಿಲ್ಲ ಸಂತಸ ಹಂಚಿಕೊಂಡಿದ್ದಾರೆ.

ಕಾಶ್ಮೀರ ದೇಶದ ಆಸ್ತಿಯಾಗಿದೆ: ಈ ಕಾಶ್ಮೀರ ದೇಶದ ಆಸ್ತಿ ನಾವು ಇದನ್ನು ಕಾಪಾಡಿಕೊಳ್ಳಬೇಕು. ಈ ಹವಾಮಾನ ಪರಿಸ್ಥಿತಿಯಲ್ಲಿ ನಮ್ಮ ಯೋಧರು ಹೇಗೆ ಗಡಿ ಕಾಯುತ್ತಾರೆ. ಅವರಿಗೆ ಧನ್ಯವಾದಗಳು’ ಎಂದು ಶಿವಕುಮಾರ್ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ