ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೀಕರ ಅಪಘಾತ : ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರು, ಮಗು ಸೇರಿ ಐವರು ಜಲಸಮಾಧಿ

Twitter
Facebook
LinkedIn
WhatsApp
ಭೀಕರ ಅಪಘಾತ : ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರು, ಮಗು ಸೇರಿ ಐವರು ಜಲಸಮಾಧಿ

ಮಂಡ್ಯ ಭೀಕರ ಅಪಘಾತ: ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬನಘಟ್ಟದ ಬಳಿ ಮಂಗಳವಾರ ಸಂಜೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದಿದ್ದು, ಭೀಕರ ಅಪಘಾತ ದಲ್ಲಿ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಜಲಸಮಾಧಿಯಾಗಿದ್ದಾರೆ.

ಮೈಸೂರು ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ವಿಸಿ ನಾಲೆಗೆ ಬಿದ್ದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಕಾರನ್ನು ಹೊರ ತೆಗೆದಿದ್ದು, ಕಾರಿನಲ್ಲಿ ಐವರ ಮೃತದೇಹಗಳು ಪತ್ತೆಯಾಗಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಮೃತರನ್ನು ತುಮಕೂರು ನಿವಾಸಿ ಕೆ.ಟಿ.ಕೃಷ್ಣಪ್ಪ(64), ಚಂದ್ರಪ್ಪ(61), ಧನಂಜಯ್ಯ (55), ಬಾಬು, ಜಯಣ್ಣ ಎಂದು ಗುರುತಿಸಲಾಗಿದ್ದು, ಅವರ ಮೃತದೇಹವನ್ನು ಪಾಂಡವಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. 

ಸ್ಥಳಕ್ಕೆ ಮಂಡ್ಯ ಎಸ್ ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸೋಮವಾರವಷ್ಟೇ ಕೆಆರ್ ಎಸ್ ಡ್ಯಾಂನಿಂದ ವಿಸಿ ನಾಲೆಗೆ ನೀರು ಬಿಡಲಾಗಿತ್ತು ಎಂದು ತಿಳಿದು ಬಂದಿದೆ.

ಡೆತ್​ನೋಟ್​ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ: 

ಕೊಡಗು: ಡೆತ್​ನೋಟ್​ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ ಆಗಿದ್ದು, ಜೊತೆಗೆ ತನ್ನನ್ನು ಮಹಿಳೆಯೊಬ್ಬಳು ಹನಿಟ್ರ್ಯಾಪ್ ಮಾಡಿರುವುದಾಗಿ ಆರೋಪ ಮಾಡಿದ್ದಾರೆ. ಜಿಲ್ಲೆಯ ಮಡಿಕೇರಿ ನಗರದ ಉಕ್ಕುಡ ನಿವಾಸಿ ಸಂದೇಶ್ (38) ನಾಪತ್ತೆಯಾದ ನಿವೃತ್ತ ಯೋಧ. ಜೀವಿತಾ ಎಂಬ ಮಹಿಳೆ ವಿರುದ್ಧ ಸಂದೇಶ್​ ಆರೋಪ ಮಾಡಿದ್ದಾರೆ. ಸತೀಶ್ ಎಂಬ ಪೊಲೀಸ್​ ಹೆಸರನ್ನೂ ಯೋಧ ಸಂದೇಶ್ ಬರೆದಿದ್ದಾರೆ. ಪೊಲೀಸ್ ಮಾನಸಿಕ‌ ಕಿರುಕುಳ ಆರೋಪ ಮಾಡಿದ್ದಾರೆ.

ಮಡಿಕೇರಿ ನಗರದ ಪಂಪಿನ ಕೆರೆ ಬಳಿ ಸಂದೇಶ್​ಗೆ ಸೇರಿದ ವಸ್ತು ಪತ್ತೆಯಾಗಿವೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರಿಂದ ಶೋಧ ಕಾರ್ಯ ಆರಂಭಿಸಲಾಗಿದೆ.

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆ ಶವ ಪತ್ತೆ

ದಾವಣಗೆರೆ: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆ ಶವ ಪತ್ತೆಯಾಗಿರುವಂತಹ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದಿದೆ. ಪತ್ನಿ ತೇಜಸ್ವಿನಿ(30)ಯನ್ನು ಪತಿಯೇ ಕೊಲೆಗೈದಿರುವ ಆರೋಪ ಕೇಳಿಬಂದಿದೆ. ಘಟನೆ ಬಳಿಕ ಪತಿ ಗುಡದಯ್ಯ, ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಮದುವೆ ಆಗಿತ್ತು, 2 ಹೆಣ್ಣು ಮಕ್ಕಳಿದ್ದವು. ಪತಿ ಹಾಗೂ ಕುಟುಂಬಸ್ಥರ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ. ಹರಿಹರ ಗ್ರಾಮಾಂತರ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ