ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!
ತುಮಕೂರು : ತುಮಕೂರಿನಲ್ಲಿ ಬೆಳ್ಳಂಬೆಳ್ಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಒಂದು ರಸ್ತೆ ಪಕ್ಕದಲ್ಲಿರುವ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಸೋಮವಾರ ಬೆಳಗಿನ ಜಾವ 4:15ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಗೋವಾದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಚಿಕ್ಕನಹಳ್ಳಿ ಬಳಿ ನಿರ್ಮಾಣವಾಗಿರುವ ನೂತನ ಬ್ರಿಡ್ಜ್ ಮೇಲೆ ಘಟನೆ ನಡೆದಿದೆ.
ಬಸ್‌ನಲ್ಲಿ ಒಟ್ಟು 29 ಜನ ಪ್ರಯಾಣಿಸುತ್ತಿದ್ದು, ಸುಮಾರು 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಶಿರಾ, ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಡೆಬಿಡದೇ ಸುರಿಯುತ್ತಿದೆ ಮಳೆ: ಕರ್ನಾಟಕದಾದ್ಯಂತ ಚಂಡಮಾರುತ ಪ್ರಭಾವ
ಬೆಂಗಳೂರು: ಫೆಂಗಲ್ ಚಂಡಮಾರುತ ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶಗಳಲ್ಲಿ ತಲ್ಲಣ ಸೃಷ್ಟಿಸಿದೆ. ನೆರೆಯ ರಾಜ್ಯಕ್ಕೆ ಅಪ್ಪಳಿಸಿರುವ ಚಂಡಮಾರುತದ ಪರಿಣಾಮ ಬೆಂಗಳೂರಿಗೂ ತಟ್ಟಿದೆ. ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಇದ್ದು, ಭಾನುವಾರ ಇಡೀ ದಿನ ಮಳೆ ಸುರಿದಿದೆ. ಭಾನುವಾರ ಮಧ್ಯಾಹ್ನದ ನಂತರವಂತೂ ಬಿಡುವುಕೊಡದೇ ಮಳೆ ಸುರಿದಿದ್ದು, ಸೋಮವಾರ ಮುಂಜಾನೆಯೂ ಮಳೆಯಾಗುತ್ತಿದೆ.
ಫೆಂಗಲ್ ಸೈಕ್ಲೋನ್ ಪರಿಣಾಮ ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಮಳೆಯಾಗುತ್ತಿದೆ. ಶೀತಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಹಾಗೇ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಶಾಲೆ, ಕಾಲೇಜುಗಳಿಗೆ ಇಂದು ರಜೆ ಪ್ರಕಟಿಸಲಾಗಿದೆ. ಆದರೆ, ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳು ರಜೆ ಘೋಷಣೆ ಮಾಡಿಲ್ಲ. ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಡಿಸಿ ಜಗದೀಶ್ ಸ್ಪಷ್ಟನೆ ನೀಡಿದ್ದಾರೆ. ಆದರೆ ಪೋಷಕರು ಎಚ್ಚರಿಕೆಯಿಂದ ಮಕ್ಕಳನ್ನ ಶಾಲೆಗೆ ಕಳುಹಿಸುವಂತೆ ಸೂಚಿಸಿದ್ದಾರೆ.
ಸೈಕ್ಲೋನ್ನಿಂದಾಗಿ ಮಂಗಳೂರು ಸಮುದ್ರ ತೀರದಲ್ಲಿ ಅಲೆಗಳ ಆರ್ಭಟ ಜೋರಾಗಿದೆ. ಪಣಂಬೂರು, ಉಳ್ಳಾಲ, ಸೋಮೇಶ್ವರ ಬೀಚ್ಗಳಲ್ಲಿ ದೊಡ್ಡ ದೊಡ್ಡ ಅಲೆಗಳು ಏಳುತ್ತಿವೆ. ಉಡುಪಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕಡಲಲ್ಲಿ ಬೃಹತ್ ಅಲೆಗಳು ಏಳುತ್ತಿದ್ದರೂ ಮಲ್ಪೆ ಬೀಚ್ನಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿದು ಜೀವದ ಜೊತೆ ಚೆಲ್ಲಾಟವಾಡುತ್ತಿರುವುದು ಕಾಣಿಸಿದೆ.